ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ಬಿಡುಗಡೆಯಾಗಿ ಜಗತ್ತಿನಾದ್ಯಂತ ಭರ್ಜರಿ ಕಲೆಕ್ಷನ್ ಮಾಡಿದೆ. ಚಿತ್ರವು ಸಾವಿರ ಕೋಟಿ ರೂ ಕ್ಲಬ್‍ಗೆ ಸೇರಿದ್ದು, ಒಟ್ಟಾರೆ 1100 ಕೋಟಿ ರೂ.ವರೆಗೂ ಸಂಗ್ರಹಿಸಿದೆ. ಚಿತ್ರಕ್ಕೆ ಪ್ರೇಕ್ಷಕರಿಂದ ಸಿಕ್ಕ ಈ ಪ್ರತಿಕ್ರಿಯೆಗೆ ಚಿತ್ರತಂಡ ಬಹಳ ಖುಷಿಯಾಗಿದೆ. ಅಷ್ಟೇ ಅಲ್ಲ, ಇನ್ನಷ್ಟು ಜನರನ್ನು ಸೆಳೆಯುವ ನಿಟ್ಟಿನಲ್ಲಿ ಒಂದು ಹೊಸ ಆಫರ್ ನೀಡಿದೆ.
ಏನದು ಆಫರ್ ಎಂಬ ಪ್ರಶ್ನೆ ಬರುವುದು ಸಹಜ. ಚಿತ್ರವು ಜಾಗತಿಕವಾಗಿ 1100 ಕೋಟಿ ಗಳಿಕೆ ಮಾಡಿರುವ ಹಿನ್ನೆಲೆಯಲ್ಲಿ ಖುಷಿಯಾಗಿರುವ ಚಿತ್ರತಂಡದವರು, ಚಿತ್ರದ ಟಿಕೆಟ್ ದರವನ್ನು ಕಡಿಮೆ ಮಾಡಿದೆ ಇಂದಿನಿಂದ (ಆಗಸ್ಟ್ 02)ಒಂದು ವಾರ ಕಾಲ ಚಿತ್ರದ ಟಿಕೆಟ್ ದರವನ್ನು ಕೇವಲ 100 ರೂ.ಗಳಿಗೆ ಇಳಿಸಿದೆ. ಈ ಒಂದು ವಾರದಲ್ಲಿ ಎಲ್ಲಾ ಚಿತ್ರಮಂದಿರಗಳಲ್ಲೂ 100 ರೂ ಕೊಟು ಚಿತ್ರಗಳನ್ನು ನೋಡಬಹುದು. ಈ ವಿಷಯವನ್ನು ಚಿತ್ರ ನಿರ್ಮಿಸಿರುವ ವೈಜಯಂತಿ ಮೂವೀಸ್ ಸಂಸ್ಥೆಯೇ ಸೋಷಿಯಲ್ ಮೀಡಿಯಾ ಮೂಲಕ ಅಧಿಕೃತವಾಗಿ ಘೋಷಿಸಿದೆ.
‘ಕಲ್ಕಿ 2898 ಎಡಿ’ ಚಿತ್ರವು ಜೂನ್ 27ರಂದು ಜಗತ್ತಿನಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರವು ಮೊದಲ ದಿನವೇ 190 ಕೋಟಿ ರೂ ಗಳಿಕೆ ಮಾಡಿತ್ತು. ಇದುವರೆಗೂ 1100 ಕೋಟಿ ರೂ ಗಳಿಕೆ ಮಾಡುವ ಮೂಲಕ 1000 ಕೋಟಿ ಕ್ಲಬ್ ಸೇರುವ ಮೂರನೇ ತೆಲುಗು ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
‘ಕಲ್ಕಿ 2898 AD’ ಚಿತ್ರದಲ್ಲಿ ಪ್ರಭಾಸ್, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್ ಅಡಿ ಅಶ್ವಿನಿ ದತ್ ನಿರ್ಮಿಸಿರುವ ಈ ಚಿತ್ರವನ್ನು ನಾಗ್ ಅಶ್ವಿನ್ ನಿರ್ದೇಶನ ಮಾಡಿದ್ದಾರೆ.
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…
ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…
ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…