ಮನರಂಜನೆ

‘ಕಲ್ಕಿ 2898 AD’ ಚಿತ್ರತಂಡದಿಂದ ಪ್ರೇಕ್ಷಕರಿಗೆ ಹೊಸ ಆಫರ್; ಏನದು ಗೊತ್ತಾ?

ಪ್ರಭಾಸ್‍ ಅಭಿನಯದ ಬಹುನಿರೀಕ್ಷಿತ ಪ್ಯಾನ್‍ ಇಂಡಿಯಾ ಚಿತ್ರ ಬಿಡುಗಡೆಯಾಗಿ ಜಗತ್ತಿನಾದ್ಯಂತ ಭರ್ಜರಿ ಕಲೆಕ್ಷನ್‍ ಮಾಡಿದೆ. ಚಿತ್ರವು ಸಾವಿರ ಕೋಟಿ ರೂ ಕ್ಲಬ್‍ಗೆ ಸೇರಿದ್ದು, ಒಟ್ಟಾರೆ 1100 ಕೋಟಿ ರೂ.ವರೆಗೂ ಸಂಗ್ರಹಿಸಿದೆ. ಚಿತ್ರಕ್ಕೆ ಪ್ರೇಕ್ಷಕರಿಂದ ಸಿಕ್ಕ ಈ ಪ್ರತಿಕ್ರಿಯೆಗೆ ಚಿತ್ರತಂಡ ಬಹಳ ಖುಷಿಯಾಗಿದೆ. ಅಷ್ಟೇ ಅಲ್ಲ, ಇನ್ನಷ್ಟು ಜನರನ್ನು ಸೆಳೆಯುವ ನಿಟ್ಟಿನಲ್ಲಿ ಒಂದು ಹೊಸ ಆಫರ್‍ ನೀಡಿದೆ.

ಏನದು ಆಫರ್‍ ಎಂಬ ಪ್ರಶ್ನೆ ಬರುವುದು ಸಹಜ. ಚಿತ್ರವು ಜಾಗತಿಕವಾಗಿ 1100 ಕೋಟಿ ಗಳಿಕೆ ಮಾಡಿರುವ ಹಿನ್ನೆಲೆಯಲ್ಲಿ ಖುಷಿಯಾಗಿರುವ ಚಿತ್ರತಂಡದವರು, ಚಿತ್ರದ ಟಿಕೆಟ್‍ ದರವನ್ನು ಕಡಿಮೆ ಮಾಡಿದೆ ಇಂದಿನಿಂದ (ಆಗಸ್ಟ್ 02)ಒಂದು ವಾರ ಕಾಲ ಚಿತ್ರದ ಟಿಕೆಟ್‍ ದರವನ್ನು ಕೇವಲ 100 ರೂ.ಗಳಿಗೆ ಇಳಿಸಿದೆ. ಈ ಒಂದು ವಾರದಲ್ಲಿ ಎಲ್ಲಾ ಚಿತ್ರಮಂದಿರಗಳಲ್ಲೂ 100 ರೂ ಕೊಟು ಚಿತ್ರಗಳನ್ನು ನೋಡಬಹುದು. ಈ ವಿಷಯವನ್ನು ಚಿತ್ರ ನಿರ್ಮಿಸಿರುವ ವೈಜಯಂತಿ ಮೂವೀಸ್‍ ಸಂಸ್ಥೆಯೇ ಸೋಷಿಯಲ್‍ ಮೀಡಿಯಾ ಮೂಲಕ ಅಧಿಕೃತವಾಗಿ ಘೋಷಿಸಿದೆ.

‘ಕಲ್ಕಿ 2898 ಎಡಿ’ ಚಿತ್ರವು ಜೂನ್‍ 27ರಂದು ಜಗತ್ತಿನಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರವು ಮೊದಲ ದಿನವೇ 190 ಕೋಟಿ ರೂ ಗಳಿಕೆ ಮಾಡಿತ್ತು. ಇದುವರೆಗೂ 1100 ಕೋಟಿ ರೂ ಗಳಿಕೆ ಮಾಡುವ ಮೂಲಕ 1000 ಕೋಟಿ ಕ್ಲಬ್ ಸೇರುವ ಮೂರನೇ ತೆಲುಗು ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

‘ಕಲ್ಕಿ 2898 AD’ ಚಿತ್ರದಲ್ಲಿ ಪ್ರಭಾಸ್‍, ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್‍ ಬ್ಯಾನರ್‍ ಅಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ.

ಭೂಮಿಕಾ

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

3 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

3 hours ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

3 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

3 hours ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

4 hours ago