ಯಶ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು (ಜನವರಿ 08) ಅಭಿಮಾನಿಗಳೊಂದಿಗೆ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಈ ಬಾರಿ ತಾವು ಊರಿನಲ್ಲಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ, ಅವರ ಹುಟುಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳಿಗೆ ಒಂದು ಆಶ್ಚರ್ಯ ಕಾದಿದೆ.
ಹೌದು, ಯಶ್ ಅಭಿನಯದ ‘ಟಾಕ್ಸಿಕ್’ ತಂಡದಿಂದ ಜನವರಿ 08ರಂದು ಒಂದು ಆಶ್ಚರ್ಯ ಕಾದಿದಿಯಂತೆ. ಹಾಗಂತ ಸ್ವತಃ ಯಶ್ ಘೋಷಿಸಿದ್ದಾರೆ. ಇಂದು ಸೋಷಿಯಲ್ ಮೀಡಿಯಾದಲ್ಲಿ ಹೊಸ ಪೋಸ್ಟರ್ ಬಿಡುಗಡೆ ಮಾಡಿರುವ ಅವರು, 08ರಂದು ಒಂದು ಆಶ್ಚರ್ಯ ಕಾದಿದೆ ಎಂದು ಹೇಳಿದ್ದಾರೆ. ಆದರೆ, ಆ ಆಶ್ಚರ್ಯವೇನು ಎಂಬುದನ್ನು ಅವರು ಬಹಿರಂಗಗೊಳಿಸಿಲ್ಲ. ‘Unleashing him’ ಎಂದಷ್ಟೇ ಬರೆದುಕೊಂಡಿದ್ದಾರೆ.
ಹಾಗೆಂದರೆ, ಅವನ ಬಿಡುಗಡೆ ಎಂದು ಅರ್ಥ ಮಾಡಿಕೊಳ್ಳಬಹುದು. ಹಾಗಾದರೆ, ಅಂದು ಏನು ಬಿಡುಗಡೆಯಾಗಬಹುದು? ಮೊದಲ ನೋಟ? ಟೀಸರ್? ಪೋಸ್ಟರ್? ಅಥವಾ ಇನ್ನೇನಾದರೂ, ಒಟ್ಟಾರೆ ಜನವರಿ ಎಂಟರ ಬುಧವಾರ ಬೆಳಿಗ್ಗೆ 10.25ಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಬಿಡುಗಡೆಯಾಗುತ್ತಿದೆ.
ಕಳೆದ ವರ್ಷದ ಯಶ್ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಟಾಕ್ಸಿಕ್’ ಚಿತರದ ಘೋಷಣೆಯಾಗಿತ್ತು. ಘೋಷಣೆಯ ದಿನದಂದೇ, ಚಿತ್ರದ ಬಿಡುಗಡೆ ದಿನಾಂಕವನ್ನು ಸಹ ಪ್ರಕಟಿಸಲಾಗಿತ್ತು. ಅದರಂತೆ ಚಿತ್ರವು 2025ರ ಏಪ್ರಿಲ್ 10ರಂದು ಜಗತ್ತಿನಾದ್ಯಂತ ಬಿಡುಗಡೆ ಆಗಬೇಕಿತ್ತು. ಆದರೆ, ಚಿತ್ರ ಶುರುವಾಗಿದ್ದೇ ಎರಡು ತಿಂಗಳ ಹಿಂದಾದ್ದರಿಂದ, ಅಂದುಕೊಂಡ ಸಮಯದಲ್ಲಿ ಚಿತ್ರವು ಬಿಡುಗಡೆಯಾಗುವುದು ಸಂಶಯ ಎಂಬ ಮಾತು ಕೇಳಿಬಂದಿತ್ತು. ಆದರೆ, ಚಿತ್ರತಂಡ ಈ ಕುರಿತು ಯಾವುದೇ ಸ್ಪಷ್ಟನೆ ಬಂದಿರಲಿಲ್ಲ. ಆದರೆ, ಸಂದರ್ಶನವೊಂದರಲ್ಲಿ ಮಾತನಾಡಿರುವ ಯಶ್, ಚಿತ್ರವು ಏಪ್ರಿಲ್ 10ಕ್ಕೆ ಬಿಡುಗಡೆ ಆಗುವುದಿಲ್ಲ ಎಂದು ಹೇಳಿದ್ದಾರೆ. ಬಹುಶಃ ನಾಡಿದ್ದು ಬಿಡುಗಡೆಯಾಗುವ ಟೀಸರ್ ಅಥವಾ ಮೊದಲ ನೋಟದಲ್ಲಿ ಚಿತ್ರದ ಬಿಡುಗಡೆ ದಿನಾಂಕ ಸಹ ಘೋಷಣೆಯಾಗುವ ನಿರೀಕ್ಷೆ ಇದೆ.
‘ಟಾಕ್ಸಿಕ್’ ಚಿತ್ರಕ್ಕೆ ಗೀತೂ ಮೋಹನ್ ದಾಸ್ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದರೆ, ಕೆ.ವಿ.ಎನ್. ಪ್ರೊಡಕ್ಷನ್ಸ್ ಮತ್ತು ಮಾನ್‍ಸ್ಟರ್ ಮೈಂಡ್ ಕ್ರಿಯೇಷಣ್ಸ್ ಬ್ಯಾನರ್ ಅಡಿ ಕೋನ ವೆಂಕಟ್‍ನಾರಾಯಣ್ ಮತ್ತು ಯಶ್ ಜೊತೆಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
‘ಟಾಕ್ಸಿಕ್’ ಚಿತ್ರದಲ್ಲಿ ಯಶ್, ಕಿಯಾರಾ ಅಡ್ವಾಣಿ, ನಯನತಾರಾ, ಹ್ಯೂಮಾ ಖುರೇಷಿ, ತಾರಾ ಸುತಾರಿಯಾ, ಶ್ರುತಿ ಹಾಸನ್, ಅನಿಲ್ ಕಪೂರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…