ಮನರಂಜನೆ

‘ಕೂಲಿ’ ಚಿತ್ರದಲ್ಲಿ ಆಮೀರ್ ಖಾನ್‍?; 30 ವರ್ಷಗಳ ನಂತರ ರಜನಿಕಾಂತ್ ಜೊತೆಗೆ ನಟನೆ

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದ ಚಿತ್ರೀಕರಣ ಕೆಲವು ದಿನಗಳಿಂದ ಹೈದರಾಬಾದ್ನಲ್ಲಿ ಸತತವಾಗಿ ನಡೆಯುತ್ತಿದೆ. ರಜನಿಕಾಂತ್‍ ಅಭಿನಯದ ಹಲವು ಪ್ರಮುಖ ದೃಶ್ಯಗಳನ್ನು ನಿರ್ದೇಶಕ ಲೋಕೇಶ್ ‍ಕನಕರಾಜ್‍ ಸೆರೆಹಿಡಿಯುವಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ, ಚಿತ್ರದಲ್ಲಿ ಬಾಲಿವುಡ್‍ ನಟ ಆಮೀರ್ ಖಾನ್‍ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಬಹುದು ಎಂಬ ಗುಸುಗುಸು ಕೇಳಿಬರುತ್ತಿದೆ.

ಹೌದು, ‘ಕೂಲಿ’ ಚಿತ್ರದ ಒಂದು ಪ್ರಮುಖ ಪಾತ್ರದಲ್ಲಿ ಆಮೀರ್ ಖಾನ್‍ ನಟಿಸುತ್ತಿದ್ದಾರೆ ಎಂಬ ಸುದ್ದಿ ಇದೆ. ಏನು ಪಾತ್ರ, ಯಾವಾಗ ಚಿತ್ರೀಕರಣ … ಮುಂತಾದ ಯಾವ ವಿಷಯದ ಬಗ್ಗೆಯೂ ಚಿತ್ರತಂಡ ಬಾಯಿಬಿಟ್ಟಿಲ್ಲ. ಅಸಲಿಗೆ ಚಿತ್ರದಲ್ಲಿ ಆಮೀರ್‍ ಖಾನ್‍ ನಟಿಸುತ್ತಿದ್ದಾರೋ, ಇಲ್ಲವೋ ಎಂಬುದನ್ನೇ ಬಹಿರಂಗಪಡಿಸಿಲ್ಲ. ಹೀಗಿರುವಾಗಲೇ, ಈ ತರಹದ ಸುದ್ದಿ ಕೇಳಿಬಂದಿದೆ.

ಅದು ನಿಜವೇ ಆದರೆ, ಸುಮಾರು 30 ವರ್ಷಗಳ ನಂತರ ರಜನಿಕಾಂತ್‍ ಮತ್ತು ಆಮೀರ್ ಖಾನ್ ಒಟ್ಟಾಗಿ ನಟಿಸುತ್ತಿದ್ದಾರೆ. ಇದಕ್ಕೂ ಮೊದಲು ಅವರಿಬ್ಬರೂ ‘ಆತಂಕ್‍ ಹೀ ಆತಂಕ್‍’ ಎಂಬ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದರು. ಈ ಚಿತ್ರ 1995ರಲ್ಲಿ ಬಿಡುಗಡೆಯಾಗಿತ್ತು. ಇದು ರಜನಿಕಾಂತ್‍ ಅವರು ಹಿಂದಿಯಲ್ಲಿ ಕಾಣಿಸಿಕೊಂಡ ಪೂರ್ಣಪ್ರಮಾಣದ ಕೊನೆಯ ಚಿತ್ರ. ಆ ನಂತರ ಅವರು ಒಂದೆರಡು ಚಿತ್ರಗಳಲ್ಲಿ ನಟಿಸಿದರೂ, ಅವೆಲ್ಲವೂ ಅತಿಥಿ ಪಾತ್ರಗಳಾಗಿದ್ದವು.

ರಜನಿಕಾಂತ್ ಇತ್ತೀಚೆಗೆ ಹಲವು ಜನಪ್ರಿಯ ನಟರ ಜೊತೆಗೆ ಕೆಲಸ ಮಾಡುತ್ತಿದ್ದಾರೆ. ‘ಜೈಲರ್‍’ ಚಿತ್ರದಲ್ಲಿ ಅವರ ಜೊತೆಗೆ ಶಿವರಾಜಕುಮಾರ್, ಜಾಕಿ ಶ್ರಾಫ್‍ ಹಾಗೂ ಮೋಹನ್ ಲಾಲ್‍ ನಟಿಸಿದ್ದರು. ‘ವೆಟ್ಟಾಯನ್‍’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್‍, ರಾಣಾ ದಗ್ಗುಬಾಟಿ, ಫಹಾದ್‍ ಫಾಸಿಲ್‍ ಮುಂತಾದವರು ನಟಿಸಿದ್ದರು. ಈಗ ‘ಕೂಲಿ’ ಚಿತ್ರದಲ್ಲಿ ಉಪೇಂದ್ರ ನಟಿಸುತ್ತಿದ್ದಾರೆ. ಜೊತೆಗೆ ಆಮೀರ್ ಖಾನ್‍ ಸಹ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಕೂಲಿ’ ಚಿತ್ರದಲ್ಲಿ ರಜನಿಕಾಂತ್‍ ಜೊತೆಗೆ ಶ್ರುತಿ ಹಾಸನ್, ಉಪೇಂದ್ರ, ಸತ್ಯರಾಜ್‍, ಮಹೇಂದ್ರನ್‍ ಮುಂತಾದವರು ನಟಿಸುತ್ತಿದ್ದು, ಲೋಕೇಶ್‍ ಕನಕರಾಜ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸನ್‍ ಪಿಕ್ಚರ್ಸ್ ನಿರ್ಮಾಣ ಮಾಡುತ್ತಿದೆ.

ಭೂಮಿಕಾ

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

2 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

3 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago