ಮನರಂಜನೆ

ಅಭಿಮನ್ಯು ಈಗ ‘ಅಭಿಮನ್ಯು S/O ಕಾಶಿನಾಥ್’; ಚಿತ್ರ ಪ್ರಾರಂಭ

ಕನ್ನಡದ ಜನಪ್ರಿಯ ನಟ-ನಿರ್ದೇಶಕ ಕಾಶೀನಾಥ್‍ ಅವರ ಮಗ ಅಭಿಮನ್ಯು ಚಿತ್ರರಂಗಕ್ಕೆ ಬಂದು 15 ವರ್ಷಗಳಾದರೂ ಒಂದೊಳ್ಳೆಯ ಗೆಲುವು ನೋಡುವುದಕ್ಕೆ ಸಾಧ್ಯವಾಗುತ್ತಲೇ ಇಲ್ಲ. ಒಂದು ದೊಡ್ಡ ಬ್ರೇಕ್‍ಗೆ ಕಾಯುತ್ತಿರುವ ಅಭಿಮನ್ಯು, ಇದೀಗ ಸದ್ದಿಲ್ಲದೆ ಹೊಸ ಚಿತ್ರದಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ.

ಅಭಿಮನ್ಯು ಅಭಿನಯದ ಹೊಸ ಚಿತ್ರ ‘ಅಭಿಮನ್ಯು S/O ಕಾಶಿನಾಥ್’. ಈ ಚಿತ್ರದ ಮುಹೂರ್ತ ಇತ್ತೀಚೆಗೆ ಬೆಂಗಳೂರಿನ ಸಹಕಾರ ನಗರದ ಛೇರ್ಮನ್ ಕ್ಲಬ್ ನಲ್ಲಿ ನಡೆಯಿತು. ಈ ಚಿತ್ರದ ಮುಹೂರ್ತಕ್ಕೆ ವಿಶೇಷ ಅತಿಥಿಯಾಗಿ ಕೋಮಲ್ ಕುಮಾರ್ ಆಗಮಿಸಿ, ಮೊದಲ ದೃಶ್ಯಕ್ಕೆ ಕ್ಲಾಪ್‍ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಈ ಹಿಂದೆ ಜಗ್ಗೇಶ್‍ ಅಭಿನಯದ ‘8MM’ ಸೇರಿದಂತೆ ಒಂದಿಷ್ಟು ಚಿತ್ರಗಳಲ್ಲಿ ಸಹನಿರ್ದೇಶಕರಾಗಿ ಕೆಲಸ ಮಾಡಿರುವ ರಾಜ್ ಮುರಳಿ ಈಗ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಹೆಜ್ಜೆ ಇಡುತ್ತಿದ್ದಾರೆ. ‘ಅಭಿಮನ್ಯು S/O ಕಾಶಿನಾಥ್’ ಚಿತ್ರದ ಮೂಲಕ ರಾಜ್ ಕಾಮಿಡಿ ಡ್ರಾಮಾ ಕಥೆ ಹೇಳೋದಿಕ್ಕೆ ಹೊರಟ್ಟಿದ್ದಾರೆ. ೀ ಚಿತ್ರವನ್ನು ಐಸಿರಿ ಪ್ರೊಡಕ್ಷನ್ ನಡಿ ಮಾರಪ್ಪ ಶ್ರೀನಿವಾಸ್ ನಿರ್ಮಾಣ ಮಾಡುತ್ತಿದ್ದಾರೆ.

‘ಅಭಿಮನ್ಯು S/O ಕಾಶಿನಾಥ್’ ಚಿತ್ರವು ಕಾಶೀನಾಥ್‍ ಶೈಲಿಯ ಚಿತ್ರವಂತೆ. ಈ ಕುರಿತು ಮಾತನಾಡುವ ಅಭಿಮನ್ಯು, ‘ರಾಜ್‌ಮುರಳಿ ಅಪ್ಪನ ಜಾನರ್ ಇಟ್ಕೊಂಡು ಈಗಿನ ಕಾಲದ ಹುಡುಗರಿಗೆ ಚಿತ್ರ ಮಾಡುತ್ತಿದ್ದಾರೆ. ಅಪ್ಪ ಇದ್ದಾಗ ನನಗೆ ಬರುತ್ತಿದ್ದ ಆಫರ್ ಇಂತಹದ್ದೇ. ಅಪ್ಪನ ನಿರ್ದೇಶನದಲ್ಲಿ ನಾನು ನಟನೆ ಮಾಡಬೇಕು ಎಂದು ಪ್ರಯತ್ನಗಳಾದವು. ‘ಅನಂತನ ಅವಾಂತರ – 2’, ‘ಅನುಭವ – 2’ ತರಹದ ಆಫರ್‍ಗಳು ಬರುತ್ತಿದ್ದವು. ಆ ತರಹದ ಪಾತ್ರಗಳು ನನಗೆ ಹೊಂದುವುದಿಲ್ಲ ಎಂದು ಅಪ್ಪನಿಗೂ ಅನಿಸುತ್ತಿತ್ತು. ನನಗೂ ಅದನ್ನು ಮಾಡುತ್ತೇನೆ ಅನ್ನೋ ವಿಶ್ವಾಸ ಇರಲಿಲ್ಲ. ಈಗ ಅಂಥದ್ದೇ ಒಂದು ಪ್ರಯತ್ನ ಮಾಡುತ್ತಿದ್ದೇವೆ’ ಎಂದರು.

‘ಅಭಿಮನ್ಯು S/O ಕಾಶಿನಾಥ್’ ಚಿತ್ರಕ್ಕೆ ‘ಹೊಸ ಅನುಭವ’ ಎಂಬ ಅಡಿಬರಹ ಇದೆ. ಚಿತ್ರದಲ್ಲಿ ಅಭಿಮನ್ಯುಗೆ ಸ್ಪಂದನ ಸೋಮಣ್ಣ, ವಿಜಯಶ್ರೀ ಕಲ್ಬುರ್ಗಿ ನಾಯಕಿಯರಾಗಿ ನಟಿಸುತ್ತಿದ್ದಾರೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಅಭಿನಂದನ್ ಕಶ್ಯಪ್ ಸಂಗೀತ ಈ ಚಿತ್ರಕ್ಕಿದೆ.

ನವೆಂಬರ್ ತಿಂಗಳಿನಿಂದ ‘ಅಭಿಮನ್ಯು S/O ಕಾಶಿನಾಥ್’ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಚಿಕ್ಕಮಗಳೂರು, ಮೈಸೂರು, ಹೈದ್ರಾಬಾದ್ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.

ಭೂಮಿಕಾ

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago