ಬೆಂಗಳೂರು: ಕನ್ನಡ ಚಿತ್ರರಂಗದ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ವಿಚ್ಚೇದನ ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ.
ಸ್ಯಾಂಡಲ್‌ವುಡ್ ಖ್ಯಾತ ನಟ ಅಜಯ್ ರಾವ್ ಹಾಗೂ ಸ್ವಪ್ನಾ ರಾವ್ ಕಳೆದ 2014ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇದ್ದಕ್ಕಿದ್ದಂತೆ ಅವರ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಡೈವೋರ್ಸ್ ನೀಡುವಂತೆ ಅಜಯ್ ಪತ್ನಿ ಸ್ವಪ್ನಾ ರಾವ್ ಕೋರ್ಟ್ ಮೊರೆ ಹೋಗಿದ್ದಾರೆ.
ಅಜಯ್ ರಾವ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದರೆ, ಸ್ವಪ್ನಾ ಅವರು ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದರು. ಮದುವೆ ಆಗಿ 10 ವರ್ಷಗಳ ಬಳಿಕ ಇಬ್ಬರ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದೆ.
ಪತಿ ಅಜಯ್ ವಿರುದ್ಧ ದೌರ್ಜನ್ಯ ಕೇಸ್ ದಾಖಲಿಸಿರುವ ಪತ್ನಿ ಸ್ವಪ್ನಾ ವಿಚ್ಚೇದನ ಕೊಡಿಸುವಂತೆ ಕೋರ್ಟ್ ಮೊರೆ ಹೋಗಿದ್ದಾರೆ.





