‘ಮೆಜೆಸ್ಟಿಕ್ 2’ ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಚಿತ್ರದ ಇತರೆ ಕೆಲಸಗಳು ನಡೆಯುತ್ತಿವೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಚಿತ್ರದ ‘ನಾಯಕ ನಾನೇ’ ಎಂಬ ಮೊದಲ ಹಾಡು ಬಿಡುಗಡೆಯಾಗಿದೆ.
ಈ ಚಿತ್ರಕ್ಕೆ ರಾಮು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದರೆ, ಚಿತ್ರದುರ್ಗದ ಆನಂದಪ್ಪ ನಿರ್ಮಾಣ ಮಾಡಿದ್ದಾರೆ. ಭರತ್ ಕುಮಾರ್, ಸಂಹಿತಾ ವಿನ್ಯಾ ನಾಯಕ ಅವರು ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ವಿಶೇಷವೆಂದರೆ, ನಟಿ ಶ್ರುತಿ ನಾಯಕನ ತಾಯಿಯಾಗಿ ಕಾಣಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿರುವ ಅವರು, ‘ಭರತ್ ನಾಯಕನ ಜವಾಬ್ದಾರಿಯನ್ನು ತುಂಬಾ ಶ್ರದ್ಧೆಯಿಂದ ನಿಭಾಯಿಸಿದ್ದಾರೆ. ಆತನ ತಾಯಿಯಾಗಿ ನಾನು ಅಭಿನಯಿಸಿದ್ದೇನೆ. ನಿರ್ದೇಶಕ ರಾಮು ಹೃದಯಕ್ಕೆ ಹತ್ತಿರವಾಗುವ ಸಂಭಾಷಣೆಗಳನ್ನು ಬರೆದಿದ್ದಾರೆ. ಈ ಶೀರ್ಷಿಕೆಗೆ ದೊಡ್ಡ ಇತಿಹಾಸವಿದೆ. ಅದು ಈ ಸಿನಿಮಾದಿಂದ ಮತ್ತೊಮ್ಮೆ ಮರುಕಳಿಸಲಿ’ ಎಂದರು.
ನಿರ್ದೇಶಕ ರಾಮು ಮಾತನಾಡಿ, ‘20-30 ವರ್ಷ ತುಂಬಾ ಕಷ್ಟಪಟ್ಟಿದ್ದೇನೆ. ಒಬ್ಬ ನಿರ್ಮಾಪಕನಿಗೆ ಕಥೆ ಒಪ್ಪಿಸೋದು ಸುಲಭವಲ್ಲ. ನನ್ನ ಕಥೆ ಕೇಳಿ ಅವಕಾಶ ಕೊಡುವುದರ ಜೊತೆಗೆ ಕೇಳಿದ್ದೆಲ್ಲವನ್ನೂ ಒದಗಿಸಿಕೊಟ್ಟು ಸಹಕರಿಸಿದ್ದಾರೆ’ ಎಂದರು.
ನಾಯಕ ಭರತ್ ಮಾತನಾಡಿ, ‘ಈಗ ಬೆಂಗಳೂರಲ್ಲಿ ಏನೇನೆಲ್ಲ ನಡೀತಿದೆ ಅದನ್ನು ಚಿತ್ರದಲ್ಲಿ ತೋರಿಸಿದ್ದೇವೆ. ಈ ಹಾಡನ್ನು ಏಳು ಗಾಯಕರು ಹಾಡಿದ್ದಾರೆ. ಸಿನಿಮಾ ಚೆನ್ನಾಗಿ ಮೂಡಿಬಂದಿದೆ. ಇದು ಮೆಜೆಸ್ಟಿಕ್‍ನಲ್ಲೇ ಹುಟ್ಟಿ ಬೆಳೆದ ಹುಡುಗನ ಕಥೆ. ನನ್ನ ಪಾತ್ರಕ್ಕೆ ಎರಡು ಶೇಡ್ಸ್ ಇದೆ. ಮೆಜೆಸ್ಟಿಕ್ ಅಂಡರ್ ಪಾಸ್, ಬಸ್ ಸ್ಟಾಪ್‍ನಲ್ಲೂ ಚಿತ್ರೀಕರಣ ಮಾಡಿದ್ದೇವೆ’ ಎಂದರು.
‘ಮೆಜೆಸ್ಟಿಕ್ 2’ ಚಿತ್ರಕ್ಕೆ ವಿನು ಮನಸು ಸಂಗೀತ, ವೀನಸ್ ಮೂರ್ತಿ ಸಂಗೀತವಿದೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…