ಮನರಂಜನೆ

ಮನೆ ದೇವರ ಕೊಂಡ ತುಳಿದ ನಟ ಡಾಲಿ ಧನಂಜಯ್‌

ಮೈಸೂರು: ಡಾಲಿ ಧನಂಜರ್‌ ಅವರ ಮದುವೆ ಇದೇ ಶನಿವಾರ ಮತ್ತು ಭಾನುವಾರ ಮೈಸೂರಿನಲ್ಲಿ ನಡೆಯಲಿದೆ.

ಈಗಾಗಲೇ ಅಭಿಮಾನಿಗಳಿಗೆ, ಚಲನಚಿತ್ರ ನಟರಿಗೆ, ರಾಜಕೀಯ ಗಣ್ಯರಿಗೆ ಮದುವೆ ಆಹ್ವಾನ ನೀಡಿರುವ ನಟ ಡಾಲಿ ಧನಂಜಯ್‌ ಅವರು, ಮದುವೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ.

ಡಾಲಿ ಮದುವೆಗೆ ಇನ್ನು ಮೂರು ದಿನ ಬಾಕಿಯಿದ್ದು, ಅವರ ಮನೆಯಲ್ಲಿ ಮದುವೆಯ ಶಾಸ್ತ್ರಗಳು ಈಗಾಗಲೇ ಶುರುವಾಗಿವೆ.

ಧನಂಜಯ್‌ ಅವರ ಹುಟ್ಟೂರು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕಾಳೇನಹಳ್ಳಿಯಲ್ಲಿ ಡಾಲಿ ಮದುವೆ ಸಂಭ್ರಮ ಕಳೆಗಟ್ಟಿದೆ.

ಕುಟುಂಬದ ಸಂಪ್ರದಾಯದಂತೆ ದೇವರಿಗೆ ಪೂಜೆ ಸಲ್ಲಿಸುವ ಕಾರ್ಯಗಳು ನಡೆದಿವೆ. ತಮ್ಮ ಮನೆ ದೇವರಾದ ಅರಸೀಕೆರೆಯ ಜೇನುಕಲ್ಲು ಸಿದ್ದೇಶ್ವರಸ್ವಾಮಿ ದೇವಸ್ಥಾನದಲ್ಲಿ ನಟ ಡಾಲಿ ದೇವರ ಫೋಟೋವನ್ನು ಹಿಡಿದುಕೊಂಡು ಕೊಂಡ ತುಳಿದಿದ್ದಾರೆ.

ಈ ಮೂಲಕ ಮದುವೆಗೂ ಮೊದಲು ನಟ ಡಾಲಿ ಧನಂಜಯ್‌ ಅವರು, ಶ್ರೀ ಜೇನುಕಲ್ಲು ಸಿದ್ದೇಶ್ವರಸ್ವಾಮಿಗೆ ತೀರಿಸಬೇಕಾದ ಹರಕೆಯನ್ನು ಭಕ್ತಿ-ಭಾವದಿಂದ ನೆರವೇರಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

35 mins ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

46 mins ago

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…

51 mins ago

ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯ ಆರ್ಭಟ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

1 hour ago

ಮೈಸೂರು: ಹಸಿರು ಕ್ರಾಂತಿ ಹರಿಕಾರ ಬಾಬುಜಗಜೀವನ್ ರಾಮ್ 119ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್‌ ರಾಮ್‌ ಅವರ 119ನೇ ಜಯಂತಿಯನ್ನು ಆಚರಣೆ…

1 hour ago

ಬೆಂಗಳೂರಿನಲ್ಲಿಂದು ಆರ್‌ಸಿಬಿ vs ಸಿಎಸ್‌ಕೆ ಹೈವೋಲ್ಟೇಜ್‌ ಕದನ

ಬೆಂಗಳೂರು: ಅತಿ ಹೆಚ್ಚು ಅಭಿಮಾನಿ ಬಳಗ ಹೊಂದಿರುವ ಐಪಿಎಲ್‌ನ 2 ತಂಡಗಳಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈ ಸೂಪರ್‌…

2 hours ago