ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿ ಜೈಲು ಸೇರಿರುವ ದರ್ಶನ್ ತೂಗುದೀಪ್ ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕುಗ್ಗಿದ್ದು, ಇದಕ್ಕಾಗಿ ದರ್ಶನ್ ಜೈಲಿನಲ್ಲಿ ಯೋಗಾಭ್ಯಾಸದ ಮೊರೆ ಹೋಗಿದ್ದಾರೆ ಎನ್ನಲಾಗುತ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನಗಳನ್ನು ದೂಡುತ್ತಿರುವ ನಟ ದರ್ಶನ್, ಜೈಲಿನ ವಾತಾವರಣದಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೊರಗೆ ಐಷಾರಾಮಿ ಜೀವನ ನಡೆಸುತ್ತಿದ್ದ ದರ್ಶನ್ಗೆ ಜೈಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಕಷ್ಟವಾಗುತ್ತಿದೆ. ಜೈಲುವಾಸ, ದರ್ಶನ್ ಅವರನ್ನು ದೈಹಿಕ ಹಾಗೂ ತುಸು ಮಾನಸಿಕವಾಗಿಯೂ ಕುಗ್ಗಿಸಿದೆ. ಮಾನಸಿಕವಾಗಿ ಕುಗ್ಗಿರುವ ದರ್ಶನ್ ಈಗ ಯೋಗದ ಮೊರೆ ಹೋಗಿದ್ದಾರೆ.
ಪ್ರತಿದಿನ ಎರಡು ಬಾರಿ ದರ್ಶನ್ ಜೈಲಿನಲ್ಲಿಯೇ ಯೋಗಾಭ್ಯಾಸ ಮಾಡುತ್ತಿದ್ದಾರೆ ಎನ್ನಲಾಗುತ್ತಿದ್ದು, ದರ್ಶನ್ ಆರೋಗ್ಯದ ಬಗ್ಗೆ ಚಿಂತಿತರಾಗಿದ್ದ ಜೈಲಾಧಿಕಾರಿಗಳಿಗೂ ಇದು ನಿರಾಳತೆ ಮೂಡಿಸಿದೆ.
ದರ್ಶನ್ ಜೈಲಿನಲ್ಲಿ ಬಹುತೇಕ ಒಂಟಿಯಾಗಿಯೇ ಸಮಯ ದೂಡುತ್ತಿದ್ದಾರೆ ಎನ್ನಲಾಗುತ್ತಿದೆ. ಸಹಖೈದಿಗಳ ಸಹವಾಸದಿಂದಲೂ ದೂರವೇ ಇದ್ದಾರೆ. ಒಂಟಿತನ ಕಳೆಯಲು ಕೆಲ ಪುಸ್ತಕಗಳನ್ನು ಜೈಲಿನ ಗ್ರಂಥಾಲಯದಿಂದ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…