ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ಬಳಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮೊದಲ ಬಾರಿಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಮೈಸೂರಿನ ತೋಟದ ಮನೆಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಜೊತೆಗೆ ಅದ್ಧೂರಿಯಾಗಿ ಸಂಕ್ರಾಂತಿ ಆಚರಿಸಿದ್ದಾರೆ.
ತಮ್ಮ ಪ್ರೀತಿಯ ಕುದುರೆಯನ್ನು ಹಿಡಿದುಕೊಂಡು ಫೋಟೋವನ್ನು ದರ್ಶನ್ ಅಪ್ಲೋಡ್ ಮಾಡಿದ್ದು, ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯವನ್ನು ಸಹ ಕೋರಿದ್ದಾರೆ.
ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ. ಸಮೃದ್ಧಿ ಮತ್ತು ಸಂತೋಷವನ್ನು ತರಲಿ ಎಂದು ಪೋಸ್ಟ್ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ದರ್ಶನ್ ಪೋಸ್ಟ್ ನೋಡಿದ ಅಭಿಮಾನಿಗಳ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ. ಪೋಸ್ಟ್‌ಗೆ ಕಮೆಂಟ್ ಮಾಡಿರುವ ಅಭಿಮಾನಿಗಳು ದರ್ಶನ್‌ಗೂ ಕೂಡ ಸಂಕ್ರಾಂತಿಯ ಶುಭ ಕೋರಿದ್ದಾರೆ.





