ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್‌ಗೆ ಫೆಬ್ರವರಿ.16ರಂದು ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಫ್ಯಾನ್ಸ್‌ಗೆ ದರ್ಶನ್ ಮನವಿಯೊಂದನ್ನು ಮಾಡಿದ್ದಾರೆ.
ಆರೋಗ್ಯ ಸಮಸ್ಯೆಯಿಂದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದು ಅಭಿಮಾನಿಗಳಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.
ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಮಸ್ಕಾರ ಹೇಳೋದಾ ಅಥವಾ ಥ್ಯಾಕ್ಸ್ ಹೇಳೋದಾ ಎಂದಿರುವ ನಟ ದರ್ಶನ್ ಅವರು, ನೀವೆಲ್ಲರೂ ಕೊಟ್ಟಿರುವ ಪ್ರೀತಿಗೆ ಏನು ಹೇಳಿದ್ರೂ ಕಮ್ಮಿನೇ. ಅದನ್ನು ಹೇಗೆ ಹಿಂದಿರುಗಿಸಿ ಕೊಡೋದು ನನಗೆ ಗೊತ್ತಾಗುತ್ತಿಲ್ಲ. ಆದರೆ ಇದೇ ಫೆಬ್ರವರಿ.16ಕ್ಕೆ ನನ್ನ ಹುಟ್ಟುಹಬ್ಬ. ಪ್ರತಿಯೊಬ್ಬರಿಗೂ ಭೇಟಿಯಾಗಿ ಥ್ಯಾಂಕ್ಸ್ ಹೇಳೋಣ ಎಂಬ ಆಸೆಯಿತ್ತು. ನನ್ನ ಆರೋಗ್ಯ ಸಮಸ್ಯೆಯಿಂದ ತುಂಬಾ ಹೊತ್ತು ನಿಂತುಕೊಳ್ಳೋಕೆ ಆಗಲ್ಲ. ಹಾಗಾಗಿ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ.
ಇದೇ ವೇಳೆ ಬೇರೆ ಭಾಷೆಯಲ್ಲಿ ಸಿನಿಮಾ ಮಾಡುವ ಬಗ್ಗೆ ದರ್ಶನ್ ಕ್ಲಾರಿಟಿ ಕೊಟ್ಟಿದ್ದಾರೆ. ಇಲ್ಲಿಯೇ ಇಷ್ಟೊಂದು ಪ್ರೀತಿ ಅಭಿಮಾನ ತೋರಿಸಿದ್ದೀರಾ. ಸುಮ್ಮನೆ ಎಲ್ಲಿಗೆ ಎಂದು ಹೋಗಲಿ. ಸಾಯೋವರೆಗೂ ಇಲ್ಲಿಯೇ ಇರುತ್ತೇನೆ. ಇಲ್ಲಿ ಬಿಟ್ಟು ನಾನು ಹೋಗೋಕೆ ಆಗೋದಿಲ್ಲ ಎಂದು ಮಾಹಿತಿ ನೀಡಿದರು.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…