ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿರುವ ನಟ ದರ್ಶನ್‌ಗೆ ಹೈಕೋರ್ಟ್ ಇಂದು ಮಧ್ಯಂತರ ಜಾಮೀನು ನೀಡಿದೆ.
ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದು, ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ.
ದರ್ಶನ್ ಜೈಲಿನಿಂದ ಬಿಡುಗಡೆಯಾದ ಕೂಡಲೇ ಮಗ ವಿನೀಶ್ ಸೋಷಿಯಲ್ ಮೀಡಿಯಾದ ಮೂಲಕ ಪ್ರತಿಕ್ರಿಯೆ ನೀಡಿದ್ದು, ಕಿಂಗ್ ಇಮೋಜಿ ಹಾಕಿ ಸಂತಸ ವ್ಯಕ್ತಪಡಿಸಿದ್ದಾರೆ.
ಇದರ ಜೊತೆಗೆ ತಂದೆ ಹಾಗೂ ಮಗನ ಬಾಂಧವ್ಯದ ಹಾಡನ್ನು ಹಂಚಿಕೊಂಡಿದ್ದು, ತಂದೆಯನ್ನು ನೋಡುವ ಕಾತುರದಲ್ಲಿದ್ದಾರೆ.