ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ನಟ ದರ್ಶನ್ ಚಿಕಿತ್ಸೆಗಾಗಿ ಹೈಕೋರ್ಟ್ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಜಾಮೀನು ಆದೇಶ ಪ್ರತಿ ಜೈಲು ಅಧಿಕಾರಿಗಳಿಗೆ ತಲುಪಿದ ಕೂಡಲೇ ದರ್ಶನ್‌ರನ್ನು ಬಿಡುಗಡೆ ಮಾಡಲಾಗಿದೆ.
ಜೈಲಿನಿಂದ ಹೊರ ಬಂದ ಬಳಿಕ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಜೊತೆ ಬೆಂಗಳೂರಿಗೆ ತೆರಳಿದರು. ಈ ವೇಳೆ ದಾರಿಯುದ್ಧಕ್ಕೂ ದರ್ಶನ್‌ರನ್ನು ನೋಡಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದು, ಡಿಬಾಸ್‌ಗೆ ಜೈಕಾರ ಹಾಕುತ್ತಿದ್ದಾರೆ.





