Mysore
25
overcast clouds
Light
Dark

ಬಳ್ಳಾರಿ ಜೈಲಿನಲ್ಲಿ ದರ್ಶನ್‌ಗೆ ಬೆನ್ನುನೋವು: ವೈದ್ಯರಿಂದ ಚಿಕಿತ್ಸೆ

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಆರೋಪದಡಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌ಗೆ ಬೆನ್ನುನೋವು ಕಾಡುತ್ತಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿದ್ದ ಆರೋಪದ ಮೇಲೆ ಬಳ್ಳಾರಿ ಸೆಂಟ್ರಲ್‌ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌, ಕಳೆದ ಮೂರು ತಿಂಗಳಿನಿಂದ ಜೈಲಿನಲ್ಲಿ ಕಾಲ ಕಳೆದು ಸೊರಗಿ ಹೋಗಿದ್ದಾರೆ. ಅಲ್ಲದೇ ಈಗ ದಾಸನಿಗೆ ಬೆನ್ನುನೋವು ಕಾಡುತ್ತಿದೆ.

ಜೈಲು ಸೇರಿದಾಗಿನಿಂದ ನಟ ದರ್ಶನ್‌ ಸುಮಾರು 15 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ಜೈಲಿನ ಊಟ, ಏಕಾಂಗಿ ತನ, ಕಟ್ಟುನಿಟ್ಟು ಕ್ರಮವೇ ದರ್ಶನ್‌ ದೇಹತೂಕ ಕಳೆದುಕೊಳ್ಳಲು ಕಾರಣ ಎಂದು ಹೇಳಲಾಗುತ್ತಿದೆ.

ಜೈಲಿನಲ್ಲಿ ನಟ ದರ್ಶನ್‌ ಬೆನ್ನುನೋವಿನಿಂದ ಬಳಲುತ್ತಿದ್ದು, ಭಾರತೀಯ ಶೈಲಿಯ ಶೌಚಾಲಯ ಬಳಸಲು ಆಗುತ್ತಿಲ್ಲ. ಪಾಶ್ಚಾತ್ಯ ಶೈಲಿಯ ಟಾಯ್ಲೆಟ್‌ ವ್ಯವಸ್ಥೆ ಮಾಡಿಕೊಡಿ ಎಂದು ಜೈಲು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ದರ್ಶನ್‌ಗೆ ಬೆನ್ನುನೋವಿರುವ ಕಾರಣ ಜೈಲಿನ ವೈದ್ಯರೇ ಚಿಕಿತ್ಸೆ ನೀಡುತ್ತಿದ್ದು, ಪಾಶ್ಚಾತ್ಯ ಟಾಯ್ಲೆಟ್‌ಗೆ ಅಥವಾ ಸರ್ಜಿಕಲ್‌ ಚೇರ್‌ ವ್ಯವಸ್ಥೆ ಮಾಡಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.