ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಆರೋಪದಡಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್‌ಗೆ ಬೆನ್ನುನೋವು ಕಾಡುತ್ತಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿದ್ದ ಆರೋಪದ ಮೇಲೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್, ಕಳೆದ ಮೂರು ತಿಂಗಳಿನಿಂದ ಜೈಲಿನಲ್ಲಿ ಕಾಲ ಕಳೆದು ಸೊರಗಿ ಹೋಗಿದ್ದಾರೆ. ಅಲ್ಲದೇ ಈಗ ದಾಸನಿಗೆ ಬೆನ್ನುನೋವು ಕಾಡುತ್ತಿದೆ.
ಜೈಲು ಸೇರಿದಾಗಿನಿಂದ ನಟ ದರ್ಶನ್ ಸುಮಾರು 15 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ಜೈಲಿನ ಊಟ, ಏಕಾಂಗಿ ತನ, ಕಟ್ಟುನಿಟ್ಟು ಕ್ರಮವೇ ದರ್ಶನ್ ದೇಹತೂಕ ಕಳೆದುಕೊಳ್ಳಲು ಕಾರಣ ಎಂದು ಹೇಳಲಾಗುತ್ತಿದೆ.
ಜೈಲಿನಲ್ಲಿ ನಟ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದು, ಭಾರತೀಯ ಶೈಲಿಯ ಶೌಚಾಲಯ ಬಳಸಲು ಆಗುತ್ತಿಲ್ಲ. ಪಾಶ್ಚಾತ್ಯ ಶೈಲಿಯ ಟಾಯ್ಲೆಟ್ ವ್ಯವಸ್ಥೆ ಮಾಡಿಕೊಡಿ ಎಂದು ಜೈಲು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ದರ್ಶನ್‌ಗೆ ಬೆನ್ನುನೋವಿರುವ ಕಾರಣ ಜೈಲಿನ ವೈದ್ಯರೇ ಚಿಕಿತ್ಸೆ ನೀಡುತ್ತಿದ್ದು, ಪಾಶ್ಚಾತ್ಯ ಟಾಯ್ಲೆಟ್‌ಗೆ ಅಥವಾ ಸರ್ಜಿಕಲ್ ಚೇರ್ ವ್ಯವಸ್ಥೆ ಮಾಡಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…
ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…
ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…
ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…
೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…
ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…