Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ ಮಾಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್‌ರನ್ನು ಹೊರ ತರಲೇಬೇಕು ಎಂದು ಪತ್ನಿ ವಿಜಯಲಕ್ಷ್ಮೀ ಶತ ಪ್ರಯತ್ನ ಮಾಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಹಾಗೂ ದರ್ಶನ್‌ ಸಹೋದರ ದಿನಕರ್‌ ತೂಗುದೀಪ್‌ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ರನ್ನು ಭೇಟಿ ಮಾಡಿ ಕಾನೂನಿನಡಿಯಲ್ಲಿ ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಭೇಟಿ ನೀಡಿದ ವಿಜಯಲಕ್ಷ್ಮೀ ಹಾಗೂ ದಿನಕರ್‌ ತೂಗುದೀಪ್‌ ಅವರು, ಕಳೆದ ಒಂದು ತಿಂಗಳಿನಿಂದ ದರ್ಶನ್‌ ಜೈಲಿನಲ್ಲಿದ್ದಾರೆ. ಆದ್ದರಿಂದ ನೀವು ಕಾನೂನಿನಡಿಯಲ್ಲಿ ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.

ವಿಜಯಲಕ್ಷ್ಮೀ, ದಿನಕರ್‌ ತೂಗುದೀಪ್‌ ಜೊತೆ ನಿರ್ದೇಶಕ ಜೋಗಿ ಪ್ರೇಮ್‌ ಕೂಡ ಡಿಕೆಶಿ ಮನೆಗೆ ಭೇಟಿ ನೀಡಿ, ದರ್ಶನ್‌ ಬಿಡುಗಡೆ ಬಗ್ಗೆ ಕೆಲಕಾಲ ಮಾತುಕತೆ ನಡೆಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್‌ರನ್ನು ಹೊರ ತರಲೇಬೇಕು ಎಂದು ಶತ ಪ್ರಯತ್ನ ಮಾಡುತ್ತಿರುವ ವಿಜಯಲಕ್ಷ್ಮೀ ಅವರು ಡಿಕೆಶಿ ಭೇಟಿ ಮಾಡಿದ್ದು, ಈಗಲಾದರೂ ದರ್ಶನ್‌ಗೆ ಜಾಮೀನು ಸಿಗುತ್ತಾ ಎಂಬುದು ಅಭಿಮಾನಿಗಳ ಪ್ರಶ್ನೆಯಾಗಿದೆ.

 

Tags: