ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಇಂದು ಭೇಟಿ ಮಾಡಿ ತಮ್ಮ ಮದುವೆ ಬರುವಂತೆ ಆಹ್ವಾನ ನೀಡಿದರು.
ಡಾಲಿ ಧನಂಜಯ್ ಫೆಬ್ರವರಿ.16ರಂದು ಡಾಕ್ಟರ್ ಧನ್ಯತಾ ಜೊತೆ ಮೈಸೂರಿನಲ್ಲಿ ಹಸೆಮಣೆ ಏರಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿನಿಮಾ ಕೆಲಸಕ್ಕೆ ಬ್ರೇಕ್ ನೀಡಿ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ.
ಈಗಾಗಲೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಹಲವಾರು ಗಣ್ಯರನ್ನು ಭೇಟಿ ಮಾಡಿ ಮದುವೆಗೆ ಆಹ್ವಾನಿಸಿದ್ದಾರೆ.



