Mysore
24
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಇದು ನನ್ನ ಹೋರಾಟಕ್ಕೆ ಸಿಕ್ಕ ಜಯ: ನಟ ದುನಿಯಾ ವಿಜಯ್‌ ಪತ್ನಿ ಪೋಸ್ಟ್‌ ವೈರಲ್‌!

ಕನ್ನಡ ಚಿತ್ರರಂಗದ ಖ್ಯಾತ ನಟ ದುನಿಯಾ ವಿಜಯ್‌ ಅವರು ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ವಜಾ ಆದ ಬೆನ್ನಲ್ಲೇ ಅವರ ಪತ್ನಿ ನಾಗರತ್ನ ಅವರು ಇದು ನನ್ನ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ.

ವಿಚ್ಛೇದನ ಪ್ರಕರಣದಲ್ಲಿ ವಿಜಯ್‌ ಪತ್ನಿ ನಾಗರತ್ನ ಪರವಾಗಿ ಕೇಸ್‌ ಬಂದ ಬಗ್ಗೆ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡು ಸಂತಸ ಹಂಚಿಕೊಂಡಿದ್ದಾರೆ. ತಾವು ಸಾಯುವವರೆಗೂ ವಿಜಯ್‌ ಅವರ ಪತ್ನಿಯಾಗಿಯೇ ಸಾಯವುದಾಗಿ ತಮ್ಮ ಪೋಸ್ಟ್‌ನಲ್ಲಿ ಹೇಳಿಕೊಂಡಿದ್ದಾರೆ.

ಪೋಸ್ಟ್‌ನಲ್ಲೇನಿದೆ?

ಸಮಸ್ತ ನಾಡಿನ ಜನತೆಗೆ ನನ್ನ ನಮಸ್ಕಾರ. ಈ ದಿನ ತುಂಬಾ ಖುಷಿ ಕೊಟ್ಟ ದಿನವಾಗಿದೆ, ನನ್ನ ಪತಿ ವಿಜಯ್ ರವರು ತಮಗೆ ವಿಚ್ಛೇದನ ಬೇಕೆಂದು ಸ್ವಲ್ಪ ವರ್ಷಗಳ ಹಿಂದೆ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುತ್ತಾರೆ,
ಆ ಹೋರಾಟದಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ನನಗೆ ಜಯ ಸಿಕ್ಕಿದೆ, ನಾನು ನಂಬಿದ ದೇವರು ನನ್ನ ಕೈ ಬಿಡಲಿಲ್ಲ,

ಇದು ನನ್ನ ಜಯ ಅನ್ನೋದಕ್ಕಿಂತ ನನ್ನ ಪತಿ ಅಧಿಕೃತವಾಗಿ ಇನ್ನೊಂದು ಮದುವೆಯಾಗಲು ಅವಕಾಶ ಸಿಕ್ಕಿಲ್ಲ ಅನ್ನೋ ನಿಜ!!! ಏಕೆಂದರೆ ನನಗೆ ನನ್ನ ಅಪ್ಪ ಅಮ್ಮ ಮದುವೆ ಮಾಡಿಕೊಟ್ಟಾಗ ಹೇಳಿದ್ದು ಕಲಿಸಿದ್ದು ಒಂದೇ ಗಂಡನೇ ದೇವರು, ಅತ್ತೆ ಮಾವನೇ ನಿಮ್ಮವರು, ಗಂಡನ ಮನೆಯೇ ನಿನ್ನ ಮನೆ, ಎಷ್ಟೇ ಕಷ್ಟಗಳು, ಏನೇ ಸಮಸ್ಯೆ ಬಂದರೂ ಅದೇ ಮನೆಯಲ್ಲೇ ಇರ್ಬೇಕು ಅವರೇ ನಿನಗೆ ಎಲ್ಲಾ ಎಂದಿದ್ದರು,

ನಾನೂ ಅದನ್ನೇ ಪಾಲಿಸಿಕೊಂಡು ಬಂದವಳು! ಅದನ್ನೇ ಪಾಲಿಸಿಕೊಂಡು ಹೋಗುವಳು ನನಗೆ ನನ್ನ ಗಂಡ ಮಕ್ಕಳು ಇಷ್ಟೇ ಸರ್ವಸ್ವ! ನನ್ನ ಜೀವ ಇರುವವರೆಗೂ ಅವರ ಜೊತೆಯಲ್ಲೇ ಇದ್ದು ಸಾಯುತ್ತೇನೆ.

ನಮ್ಮ ಕಾನೂನಿನ ಪ್ರಕಾರ ವಿಚ್ಚೇದನ ಆದ ನಂತರನೇ ಇನ್ನೊಂದು ಮದುವೆಗೆ ಅವಕಾಶ ಇರುವುದು ಎಂಬ ಸತ್ಯ ನಿಮಗೂ ಗೊತ್ತು, ನನ್ನ ಪತಿ ಇನ್ನೊಂದು ಮದುವೆಯಾಗಿಲ್ಲ ಎಂದು ಅವರೇ ನಮಗೆ ಹೇಳಿರುತ್ತಾರೆ,

ಈ ಕೇಸಿನಲ್ಲಿ ನಮ್ಮ ವಕೀಲರಾದ ಬಿಎನ್ ನಾಗರಾಜ್ ಸರ್ ಅವರ ಶ್ರಮ ಅಪಾರವಾದುದು. ದಯವಿಟ್ಟು ಬೇರೆ ವದಂತಿಗಳಿಗೆ ಕಿವಿಕೊಡದೆ, ನಿಮ್ಮ ಆಶೀರ್ವಾದ ಸದಾ ನಮ್ಮ ಕುಟುಂಬದ ಮೇಲೆ ಇರಲಿ ಎಂದು ಸಮಸ್ತ ನಾಡಿನ ಜನತೆಗೆ ಈ ಮೂಲಕ ಕೇಳಿಕೊಳ್ಳುತ್ತೇನೆ.

ದಯವಿಟ್ಟು ಮಾದ್ಯಮ ಮಿತ್ರರಿಗೆ ಕೇಳಿಕೊಳ್ಳುವುದೇನೆಂದರೆ ಕೀರ್ತಿ ಪಟ್ಟಡಿ ಯನ್ನು ೨ನೇ ಹೆಂಡ್ತಿ ಅಂತಾ ದಯವಿಟ್ಟು ಪ್ರಸಾರ ಮಾಡಬೇಡಿ! ನಮ್ಮ ಸಂಸಾರ ಚೆನ್ನಾಗಿರಲಿ ಅಂತ ಹರಸಿ ಹಾರೈಸಿ ಎಂದು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

https://www.facebook.com/share/p/jk9fSCMpwNJJEEEp/?mibextid=oFDknk

Tags: