ರಾಜ್ಯ ಸರ್ಕಾರ ಘೋಷಿಸಿದ್ದ 2019ರ ಅತ್ಯುತ್ತಮ ನಟ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ನಟ ಕಿಚ್ಚ ಸುದೀಪ್ ನಿರಾಕರಿಸಿದ್ದಾರೆ.
ʼಪೈಲ್ವಾನ್ʼ ಸಿನಿಮಾದ ನಟನೆಗಾಗಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ಅತುತ್ತಮ ನಟ ಪ್ರಶಸ್ತಿಗೆ ರಾಜ್ಯ ಸರ್ಕಾರ ಆಯ್ಕೆ ಮಾಡಿತ್ತು. ಆದರೆ ಈ ಪ್ರಶಸ್ತಿಯನ್ನು ನಿರಾಕರಿಸಿ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ದೀರ್ಘವಾಗಿ ಬರೆದುಕೊಂಡಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿರುವ ಕಿಚ್ಚ ಸುದೀಪ್, 2019ನೇ ಕ್ಯಾಲೆಂಡರ್ ವರ್ಷದ ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿ ನೀಡಿರುವುದಕ್ಕೆ ಗೌರವಾನ್ವಿತ ತೀರ್ಪುಗಾರರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಹಲವು ವರ್ಷಗಳಿಂದ ಪ್ರಶಸ್ತಿ ಸ್ವೀಕರಿಸುವುದನ್ನು ನಾನು ನಿಲ್ಲಿಸಿದ್ದೇನೆ. ವೈಯುಕ್ತಿಕ ಕಾರಣಗಳಿಂದ ನಾನು ಈ ಪ್ರಶಸ್ತಿಯನ್ನು ಸ್ವೀಕರಿಸುತ್ತಿಲ್ಲ. ಅನೇಕ ಅರ್ಹ ನಟರ ನಡುವೆ ಒಬ್ಬರು ಈ ಪ್ರಶಸ್ತಿ ಸ್ವೀಕರಿಸುವುದನ್ನು ನೋಡಲು ಖುಷಿ ಕೊಡುತ್ತದೆ. ನನ್ನ ಗುರಿ ಜನರನ್ನು ರಂಜಿಸುವುದು. ಪ್ರಶಸ್ತಿ ನಿರೀಕ್ಷೆಯಿಲ್ಲದೆಯೇ ಎಂದು ಬರೆದುಕೊಂಡಿದ್ದಾರೆ.
ನನ್ನನ್ನು ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕಾಗಿ ಪ್ರತಿಯೊಬ್ಬ ಜ್ಯೂರಿ ಸದಸ್ಯರಿಗೆ ಧನ್ಯವಾದ ಅರ್ಪಿಸುತ್ತೇನೆ. ನನ್ನ ನಿರ್ಧಾರದಿಂದ ಬೇಸರವಾಗಿದೆ ಎಂಬುದು ಗೊತ್ತು. ಆದ ಕಾರಣ ತೀರ್ಪುಗಾರರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ನೀವು ನನ್ನ ಆಯ್ಕೆಯನ್ನು ಗೌರವಿಸುತ್ತೀರಿ ಹಾಗೂ ನಾನು ಆಯ್ಕೆ ಮಾಡಿದ ಹಾದಿಯನ್ನು ಬೆಂಬಲಿಸುತ್ತೀರಿ ಎಂದು ನಾನು ನಂಬಿದ್ದೇನೆ. ಮತ್ತೊಮ್ಮೆ ನನ್ನ ಕೆಲಸವನ್ನು ಗುರುತಿಸಿ ಈ ಪ್ರಶಸ್ತಿ ನೀಡಿದ್ದಕ್ಕಾಗಿ ಗೌರವಾನ್ವಿತ ಸದಸ್ಯರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಮೈಸೂರು: ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿಉರಿದಿದ್ದು,ಕೆಲಕಾಲ ಆತಂಕ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್…
ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ…
ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ…
ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು…
ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ…
ಬೆಂಗಳೂರು : ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್ ಅವರು ಹತ್ತು…