ಮನರಂಜನೆ

ನಟ ಮೋಹನ್‌ ಲಾಲ್‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಘೋಷಣೆ

ಬೆಂಗಳೂರು : ಮಲಯಾಳಂ ಖ್ಯಾತ ನಟ ಮೋಹನ್​​ ಲಾಲ್​​ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಮಲಯಾಳಂ ಮಾತ್ರವೇ ಅಲ್ಲದೆ ಭಾರತದ ಹಲವಾರು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸೆಪ್ಟೆಂಬರ್ 23 ರಂದು ನಡೆಯಲಿರುವ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮೋಹನ್ ಲಾಲ್ ಅವರಿಗೆ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಘೋಷಿಸಿದೆ.

ಫಾಲ್ಕೆ ಪ್ರಶಸ್ತಿ ಗೌರವಕ್ಕೆ ಭಾಜನರಾದ ಮಲಯಾಳಂ ಚಿತ್ರರಂಗದ ಎರಡನೇ ಕಲಾವಿದರು ಮೋಹನ್​​ಲಾಲ್ ಆಗಿದ್ದಾರೆ. ಈ ಹಿಂದೆ 2004ರ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಮಲಯಾಳಂ ಚಿತ್ರರಂಗದ ಜನಪ್ರಿಯ ನಿರ್ದೇಶಕ ಅಡೂರು ಗೋಪಾಲಕೃಷ್ಣನ್ ಅವರಿಗೆ ನೀಡಲಾಗಿತ್ತು. ಈಗ ಮೋಹನ್​​ಲಾಲ್ ಅವರಿಗೆ 2023 ರ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ. ಮೋಹನ್ ಲಾಲ್ ಅವರು ಸಿನಿಮಾ ರಂಗಕ್ಕೆ ಸಲ್ಲಿಸಿರುವ ಅಭೂತಪೂರ್ವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

2022ರ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮಿಥಿನ್ ಚಕ್ರವರ್ತಿ ಅವರಿಗೆ ನೀಡಿ ಗೌರವಿಸಲಾಗಿತ್ತು. 2019 ರಲ್ಲಿ ತಮಿಳಿನ ಸೂಪರ್ ಸ್ಟಾರ್ ರಜನೀಕಾಂತ್ ಅವರಿಗೆ ನೀಡಲಾಗಿತ್ತು. ಈಗ ದಕ್ಷಿಣದ ಮತ್ತೊಬ್ಬ ಸೂಪರ್ ಸ್ಟಾರ್ ಆಗಿರುವ ಹಾಗೂ ಅತ್ಯದ್ಭುತ ನಟರಾಗಿರುವ ಮೋಹನ್ ಲಾಲ್ ಅವರಿಗೆ ನೀಡಲಾಗಿದೆ. ಮೋಹನ್ ಲಾಲ್ ಅವರು ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಆಗಿರುವುದಕ್ಕೆ ಹಲವಾರು ಸಿನಿಮಾ ಸೆಲೆಬ್ರಿಟಿಗಳು, ರಾಜಕಾರಣಿಗಳು ಶುಭಾಶಯಗಳನ್ನು ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಹ ಮೋಹನ್​​ಲಾಲ್ ಅವರಿಗೆ ಶುಭಾಶಯ ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು | ಅರಣ್ಯದಲ್ಲಿ 292 ಗಾಂಜಾ ಗಿಡಗಳು ಪತ್ತೆ ; 213 ಕೆಜಿ ಗಾಂಜಾ ವಶ

ಹನೂರು : ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ದೊಡ್ಡಸಂಪಿಗೆ ಅರಣ್ಯ ಪ್ರದೇಶದ ಕೂಳಿಹಟ್ಟಿ ಭಾಗದ ಬೆಳ್ಳಾಜಿ…

12 hours ago

ಉತ್ತರ ಪ್ರದೇಶದಲ್ಲಿ ಮುಂದುವರಿದ ಮಳೆಯ ಆರ್ಭಟ

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜ್ಯದ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ…

15 hours ago

ರಾಜ್ಯದಲ್ಲಿ ಬರ ತಾಂಡವ: ಪರಿಶೀಲನೆಗೆ ಕೇಂದ್ರದ ತಂಡ ರಾಜ್ಯಕ್ಕೆ ಆಗಮನ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ…

16 hours ago

ರಾಜ್ಯದಲ್ಲಿ ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌ ಪ್ರಶ್ನೆ ಇಲ್ಲ: ಸಚಿವ ಕೆ.ಜೆ.ಜಾರ್ಜ್

ಮೈಸೂರು: ವಿದ್ಯುತ್‌ ಕೊರತೆ ಹಾಗೂ ರಾಜ್ಯದ ವಿದ್ಯುತ್‌ ಪರಿಸ್ಥಿತಿ ಕುರಿತು ಮಾತನಾಡಿರುವ ಸಚಿವ ಕೆ.ಜೆ.ಜಾರ್ಜ್‌ ರಾಜ್ಯದಲ್ಲಿ ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌…

16 hours ago

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

23 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

23 hours ago