ಮಂಗಳೂರು: ನಟ ಪ್ರಭುದೇವ ಕುಟುಂಬ ಸಮೇತರಾಗಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆ ಸಲ್ಲಿಸಿದ್ದಾರೆ.
ಪತ್ನಿ ಹಾಗೂ ಕುಟುಂಬದವರು ಮಹಾಭಿಷೇಕ ಪೂಜೆ ನೆರವೇರಿಸಿ ಪ್ರಸಾದ ಸ್ವೀಕರಿಸಿದರು. ನಂತರ, ದೇವಳ ಕಚೇರಿಯ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ ದಂಪತಿಗೆಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಿದರು.
ಬಳಿಕ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ, ಅಲ್ಲಿನ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ಮಂತ್ರಾಕ್ಷತೆ ಪಡೆದರು.