ಮಂಗಳೂರು: ಅಭ್ಯರ್ಥಿ ಯಾವ ಪಕ್ಷ ಪ್ರತಿನಿಧಿಸುತ್ತಾನೆ ಎಂಬುದನ್ನು ನೋಡಬೇಡಿ ಅಭ್ಯರ್ಥಿಯನ್ನು ನೋಡಿ ಮತ ಚಲಾಯಿಸಿ ಎಂದು ನಟ ಪ್ರಕಾಶ್ ರಾಜ್ ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಕಾಶ್ ರಾಜ್, ಪ್ರಜಾಪ್ರಭುತ್ವದ ಸೊಬಗೇ ಅದು, ನಮಗೆ ಸೂಕ್ತ ಎನಿಸುವ ಅಭ್ಯರ್ಥಿಯನ್ನು ಆಯ್ಕೆಮಾಡಿಕೊಳ್ಳಬೇಕು. ವ್ಯಕ್ತಿ ಸ್ಪರ್ಧಿಸುವ ಪಕ್ಷಕ್ಕಿಂತ ವ್ಯಕ್ತಿತ್ವ ಮುಖ್ಯವಾಗಿರುತ್ತದೆ ಎಂದರು.
ಅಭ್ಯರ್ಥಿ ಯಾವ ಪಕ್ಷ ಪ್ರತಿನಿಧಿಸುತ್ತಾನೆ ಅನ್ನೋದು ಬೇರೆ ವಿಷಯ. ಆದರೆ ಅವನು ನಮ್ಮ ನಿಯೋಜಕ ವರ್ಗವನ್ನು ಪ್ರತಿನಿಧಿಸುತ್ತಾನೆಯೇ? ನಮ್ಮ ಕಷ್ಟಗಳಿಗೆ ಸ್ಪಂದಿಸುತ್ತಾನೆಯೇ? ನಮಗೆ ಅವಶ್ಯವಿರುವ ಸಮಯದಲ್ಲಿ ಕೈಗೆ ಸಿಗುತ್ತಾನೆಯೇ? ಎಂಬುದನ್ನು ಗಮನಿಸಿ ಮತ ಚಲಾಯಿಸಬೇಕು. ನಾವು ಆರಿಸಿ ಕಳಿಸುವ ವ್ಯಕ್ತಿ ನಮ್ಮವನಾಗಿರಬೇಕು ಮತ್ತು ಸದಾ ನಮ್ಮ ಜೊತೆ ಇರಬೇಕು ಎಂದು ಪ್ರಕಾಶ್ ರಾಜ್ ಸಲಹೆ ನೀಡಿದರು.
ರಾಜಕೀಯ ಪಕ್ಷಗಳಿಗೆ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ, ನನಗೆ ಯಾವುದೇ ಪಕ್ಷ ಸೇರುವ ಇಚ್ಛೆಯಿಲ್ಲ, ಸಮಾಜ ಮತ್ತು ಮಾಧ್ಯಮ ತನ್ನನ್ನು ಗೌರವಿಸುತ್ತವೆ ನನಗೆ ಅಷ್ಟು ಸಾಕು ಎಂದು ಪ್ರಕಾಶ್ ರಾಜ್ ತಿಳಿಸಿದರು.
ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…
ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…