ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಬಗ್ಗೆ ಒಂದು ಮೊಟ್ಟೆಯ ಕಥೆ ಚಿತ್ರದ ಹೀರೋ ರಾಜ್ ಬಿ ಶೆಟ್ಟಿ ಅವರು ಮೊದಲ ಬಾರಿಗೆ ಮಾತನಾಡಿದ್ದಾರೆ.
ದರ್ಶನ್ ಪರ ವಿರೋಧ ಹಲವಾರು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ನಟ ರಾಜ್ ಬಿ ಶೆಟ್ಟಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಭಾಗಿಯಾಗಿದ್ದೂ ನಿಜವೇ ಆಗಿದ್ದಲ್ಲಿ, ಅವರಿಗೆ ಶಿಕ್ಷೆಯಾಗಲಿ. ಶಿಕ್ಷೆ ಮುಗಿದ ಬಳಿಕ ಅವರು ಹೊಸ ವ್ಯಕ್ತಿಯಾಗಿ ಆಚೆ ಬರಲಿ ಎಂದು ರಾಜ್ ಬಿ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.
ಸಿನಿಮಾ ಜನ ಎಂದರೆ ಯಾರೂ ಹೆಣ್ಣು ಕೊಡುವುದಿಲ್ಲ, ಮನೆ ಬಾಡಿಗೆಗೆ ಕೊಡುವುದಿಲ್ಲ ಇಂತಹ ಸಂದರ್ಭದಲ್ಲಿ ಈ ರೀತಿಯ ಘಟನೆ ನಡೆದಿರುವುದು ಚಿತ್ರರಂಗಕ್ಕೆ ದೊಡ್ಡ ಹೊಡೆತ ಬಿದ್ದಂತೆ ಆಗಿದೆ. ಕಾನೂನಿನಡಿ ಎಲ್ಲರಿಗೂ ಸಮಾನ ನ್ಯಾಯ ಸಿಗುತ್ತದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ. ಈ ಪ್ರಕರಣದಲ್ಲಿ ದರ್ಶನ್ ಅವರು ತಪ್ಪು ಮಾಡಿಲ್ಲ ಎಂದಾದರೇ ಅವರು ರಿಲೀಸ್ ಆಗುತ್ತಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ದರ್ಶನ್ ಅವರ ಪ್ರಕರಣದಿಂದ ಚಿತ್ರರಂಗಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಇದು ನಮ್ಮ ಇಮೇಜ್‌ಗೂ ಡ್ಯಾಮೇಜ್ ಮಾಡಿದೆ. ಚಿತ್ರರಂಗ ಒಂದು ಕುಟುಂಬದಂತೆ ಇದ್ದು, ಇಲ್ಲಿ ಎಲ್ಲರೂ ಸಂಬಂಧಿಕರೇ ಆಗಿದ್ದಾರೆ. ಕೆಜಿಎಫ್ ನಂತಹ ಉತ್ತಮ ಸಿನಿಮಾ ಬಂದಾಗ ನಮಗೆ ಹೇಗೆ ಹೆಮ್ಮೆ ಎನಿಸುತ್ತದೆಯೋ ಹಾಗೆಯೇ ಇಂತಹ ಘಟನೆಗಳು ನಡೆದಾಗ ನಾವು ಒಗ್ಗಟ್ಟಾಗಿಯೇ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಎಂದು ವಿವರಿಸಿದ್ದಾರೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…