ತಮಿಳುನಾಡು: 18ನೇ ಸಾರ್ವತ್ರಿಕ ಚುನಾವಣೆಯಲ್ಲಿ ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರ ಜಯ ಗಳಿಸಿದ ಬಳಿಕ ಇಂದು (ಜೂನ್.9) ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುವ ಶುಭಗಳಿಗೆಗೆ ತಮಿಳು ಸೂಪರ್‌ಸ್ಟಾರ್ ರಜನಿಕಾಂತ್ ಅವರು ಶುಭ ಕೋರಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಳ್ಳುತ್ತಿರುವುದು ದೊಡ್ಡ ಸಾಧನೆಯಾಗಿದೆ. ಇದು ಪ್ರಜಾಪ್ರಭುತ್ವದ ಆರೋಗ್ಯಕರ ಸಂಕೇತವಾಗಿದೆ ಎಂದು ಅವರು ಹೇಳಿದ್ದಾರೆ.
ಇಂದು ತಮ್ಮ ತಮಿಳುನಾಡಿನ ನಿವಾಸದಿಂದ ದೆಹಲಿಗೆ ತೆರಳುವ ಮುನ್ನಾ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜವಾಹರಲಾಲ್ ನೆಹರು ಬಳಿಕ ಸತತ ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಮೋದಿ ಅವರಿಗೆ ನನ್ನ ಹೃದಯಪೂರ್ವಕ ಶುಭಾಷಯಗಳು ಎಂದು ಹೇಳಿದರು.
ಇಂದು ಮೋದಿ ಪ್ರಮಾಣವಚನ ಸ್ವೀಕಾರಕ್ಕೆ 8 ಸಾವಿರ ಮಂದಿಗೆ ಆಹ್ವಾನ ನೀಡಲಾಗಿದ್ದು, ಇದರಲ್ಲಿ ನಟ ರಜನಿಕಾಂತ್ ಅವರಿಗೂ ಆಹ್ವಾನ ನೀಡಿದ್ದು ಇಂದು ದೆಹಲಿಗೆ ತೆರಳಿದ್ದಾರೆ.