ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಇಂದು ರಾತ್ರಿ ನಟ ಶಿವರಾಜ್ ಕುಮಾರ್ ಅವರು ಅಮೆರಿಕಾಗೆ ಪಯಣ ಬೆಳೆಸಲಿದ್ದಾರೆ.
ಇಂದು ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿ ನಿವೇದಿತಾ ಹಾಗೂ ಆಪ್ತರ ಜೊತೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೆರಿಕಾಗೆ ಪಯಣ ಬೆಳೆಸಲಿದ್ದಾರೆ.
ಇದೇ ಡಿಸೆಂಬರ್.24ರಂದು ಶಿವರಾಜ್ ಕುಮಾರ್ ಅವರಿಗೆ ಸರ್ಜರಿ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಈ ಹಿನ್ನೆಲೆಯಲ್ಲಿ ಇಂದು ರಾತ್ರಿಯ ವೇಳೆಗೆ ವಿಮಾನ ಏರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಈಗಾಗಲೇ ಹಲವು ನಟರು ಹಾಗೂ ರಾಜಕಾರಣಿಗಳು ಶಿವಣ್ಣ ಅವರ ಮನೆಗೆ ಭೇಟಿ ನೀಡಿ ಉಭಯ ಕುಶಲೋಪರಿ ವಿಚಾರಿಸಿದ್ದಾರೆ.