ಮನರಂಜನೆ

ನಟ ಶಿವರಾಜ್‌ಕುಮಾರ್ ಅವರ ಶಸ್ತ್ರಚಿಕಿತ್ಸೆ ಯಶಸ್ವಿ

ಅಮೆರಿಕಾ/ನವದೆಹಲಿ: ಸ್ಯಾಂಡಲ್‌ವುಡ್‌ ನಟ ಶಿವರಾಜ್‌ಕುಮಾರ್ ಅವರು ನಿನ್ನೆ(ಡಿ.24) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಡಾ.ಮುರುಗೇಶ ಮನೋಹರನ್‌ ತಿಳಿಸಿದ್ದಾರೆ.

ಈ ಕುರಿತು ವಿಡಿಯೋ ಸಂದೇಶದಲ್ಲಿ ಮಾಹಿತಿ ನೀಡಿರುವ ಅವರು, ಶಿವರಾಜ್‌ಕುಮಾರ್‌ ಅವರಿಗೆ ನಿನ್ನೆ ಮಾಡಿದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಅವರು ಈಗ ಸ್ಥಿರ ಪರಿಸ್ಥಿತಿಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆಂದು ತಿಳಿಸಲು ಈ ಸಂವಾದವನ್ನು ಹಂಚಿಕೊಳ್ಳುತ್ತಿರುವುದು ಸಂತೋಷವಾಗುತ್ತಿದೆ ಎಂದಿದ್ದಾರೆ.

ಶಿವರಾಜ್‌ಕುಮಾರ್ ಅವರ ಆರೋಗ್ಯ ಸ್ಥಿತಿಯೂ ಶಸ್ತ್ರಚಿಕಿತ್ಸೆಯ ವೇಳೆ ಮತ್ತು ಶಸ್ತ್ರಚಿಕಿತ್ಸೆ ನಂತರದ ಆರೈಕೆ ಸಮಯದಲ್ಲಿ ಸ್ಥಿರವಾಗಿತ್ತು. ಅವರ ಸುಗಮ ಚೇತರಿಕೆಯನ್ನು ಖಚಿತಪಡಿಸಲು ಅವರು ಪ್ರಸ್ತುತ ತೀವ್ರ ನಿರೀಕ್ಷಣೆಯಲ್ಲಿದ್ದಾರೆ. ಜೊತೆಗೆ ಪರಿಣಿತ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳ ತಂಡದಿಂದ ಅತ್ಯುತ್ತಮ ಆರೈಕೆ ಮತ್ತು ಗಮನವನ್ನು ಪಡೆಯುತ್ತಿದ್ದಾರೆ ಎಂದು ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.

ಡಾ. ಶಿವರಾಜ್‌ಕುಮಾರ್ ಅವರ ಅಭಿಮಾನಿಗಳು, ಸಹೋದ್ಯೋಗಿಗಳು, ಶುಭಚಿಂತಕರು ಹಾಗೂ ಮಾಧ್ಯಮಗಳು ಈ ಸಂದರ್ಭದಲ್ಲಿ ತೋರಿಸಿದ ನಿರಂತರ ಬೆಂಬಲ, ಪ್ರಾರ್ಥನೆ ಮತ್ತು ಮೆಚ್ಚುಗೆ ಸಂದೇಶಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇವೆ. ನಿಮ್ಮ ಪ್ರೋತ್ಸಾಹವು ಶಿವರಾಜ್‌ಕುಮಾರ್ ಮತ್ತು ಅವರ ಕುಟುಂಬಕ್ಕೆ ದೊಡ್ಡ ಶಕ್ತಿ ಒದಗಿಸಿದೆ. ಅವರ ಚೇತರಿಕೆ ಕುರಿತು ಮುಂದಿನ ಮಾಹಿತಿಯನ್ನು ಸಮಯಕ್ಕೆ ಸರಿಯಾಗಿ ಹಂಚಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

2 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

2 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

3 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

4 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

5 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

5 hours ago