ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಅಧ್ಯಾಯ 1’ ಚಿತ್ರದ ಬಿಡುಗಡೆಗೆ ಕೇವಲ 20 ದಿನಗಳಿದ್ದರೂ, ಚಿತ್ರತಂಡ ಹೆಚ್ಚು ಪ್ರಚಾರ ಮಾಡುತ್ತಿಲ್ಲ. ಸದ್ದಿಲ್ಲದೆ ಕೆಲಸದಲ್ಲಿ ನಿರತವಾಗಿದೆ. ಹೀಗಿರುವಾಗಲೇ, ಚಿತ್ರಕ್ಕೆ ಪಂಜಾಬ್‍ನ ಖ್ಯಾತ ಗಾಯಕ ಮತ್ತು ನಟ ದಿಲ್ಜಿತ್ ದೋಸಾಂಜ್ ಒಂದು ಹಾಡು ಹಾಡಿದ್ದಾರೆ.
ಈ ವಿಷ್ಯವನ್ನು ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ದಿಲ್ಜಿತ್, ಮೂಲ ‘ಕಾಂತಾರ’ ಸಿನಿಮಾ ತಮ್ಮ ಮೇಲೆ ಮಾಡಿದ ಪರಿಣಾಮವನ್ನು ಸ್ಮರಿಸಿದ್ದಾರೆ. ‘ರಿಷಬ್ ಶೆಟ್ಟಿ ಅವರಿಗೆ ನನ್ನ ಸಲಾಂ. ಅವರು ನಿಜಕ್ಕೂ ಒಂದು ಮಾಸ್ಟರ್‌ಪೀಸ್ ಚಿತ್ರವನ್ನು ನಿರ್ಮಿಸಿದ್ದಾರೆ. ಆ ಸಿನಿಮಾದೊಂದಿಗೆ ನನಗೆ ವೈಯಕ್ತಿಕ ನಂಟಿದೆ, ಅದನ್ನು ಹೇಳಲು ಸಾಧ್ಯವಿಲ್ಲ. ಆದರೆ, ಚಿತ್ರಮಂದಿರದಲ್ಲಿ ‘ವರಾಹ ರೂಪಂ’ ಹಾಡು ಬಂದಾಗ, ಆನಂದ ಭಾಷ್ಪದಿಂದ ಕಣ್ಣು ತುಂಬಿಕೊಂಡಿದ್ದೆ’ ಎಂದು ಭಾವುಕರಾಗಿ ಬರೆದಿದ್ದಾರೆ.
ಇದನ್ನು ಓದಿ: ಸಿನಿಮಾ ನಿರ್ಮಾಣದತ್ತ ಪ್ರಜ್ವಲ್: ಪುರಾತನ ಫಿಲಂಸ್ ಜೊತೆ ನಿರ್ಮಾಣ
‘ಕಾಂತಾರ – ಅಧ್ಯಾಯ 1’ ಚಿತ್ರಕ್ಕಾಗಿ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರೊಂದಿಗೆ ಕೆಲಸ ಮಾಡಿದ ಬಗ್ಗೆಯೂ ದಿಲ್ಜಿತ್ ಸಂತಸ ವ್ಯಕ್ತಪಡಿಸಿದ್ದಾರೆ. ‘ಕೇವಲ ಒಂದೇ ದಿನದಲ್ಲಿ ಅವರಿಂದ ಸಾಕಷ್ಟು ಕಲಿತುಕೊಂಡೆ’ ಎಂದು ತಿಳಿಸಿದ್ದಾರೆ.
‘ಕಾಂತಾರ ಚಾಪ್ಟರ್ 1’ ಚಿತ್ರವು ಅಕ್ಟೋಬರ್ 02ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ನಿರ್ಮಿಸಿದ್ದು, ರಿಷಭ್ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಗುಲ್ಶನ್ ದೇವಯ್ಯ ಮುಂತಾದವರು ನಟಿಸಿದ್ದು, ಚಿತ್ರವು ಕನ್ನಡ ಸೇರಿದಂತೆ ತೆಲುಗು, ಹಿಂದಿ, ತಮಿಳು, ಮಲಯಾಳಂ, ಬಂಗಾಳಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಲಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…