ಮನರಂಜನೆ

ಈ ಬಾರಿ ಜಯನಗರದ ಎಂಇಎಸ್‌ ಮೈದಾನದಲ್ಲಿ ಸುದೀಪ್‌ ಜನ್ಮದಿನಾಚರಣೆ

ಬೆಂಗಳೂರು: ಸೆಪ್ಟೆಂಬರ್.‌2ರಂದು ನಟ ಸುದೀಪ್‌ ಅವರಿಗೆ 51ನೇ ಜನ್ಮದಿನದ ಸಂಭ್ರಮ. ಈ ವರ್ಷ ಬೆಂಗಳೂರಿನ ಜಯನಗರದಲ್ಲಿರುವ ಎಂಇಎಸ್‌ ಮೈದಾನದಲ್ಲಿ ಜನ್ಮದಿನವನ್ನು ಆಚರಿಸಿಕೊಳ್ಳಲು ಸುದೀಪ್‌ ನಿರ್ಧಾರ ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಸುದೀಪ್‌ ಅವರು, ನನ್ನ ಮನೆಯ ಬಳಿ ಜನ್ಮದಿನದ ಆಚರಣೆಗೆ ಅವಕಾಶ ಇಲ್ಲ. ಈ ವರ್ಷ ಎಂಇಎಸ್‌ ಮೈದಾನದಲ್ಲಿ ಬೆಳಿಗ್ಗೆ 11.30ರವರೆಗೆ ಸುದೀಪ್‌ ಇರಲಿದ್ದಾರೆ.

ವರ್ಷಗಳು ಉರುಳುತ್ತಿದ್ದಂತೆ ಅಭಿಮಾನಿಗಳ ಸಂಖ್ಯೆಯೂ ಕೂಡ ಜಾಸ್ತಿಯಾಗುತ್ತಿದೆ. ಕಳೆದ ವರ್ಷದ ಸಂಭ್ರಮಾಚರಣೆ ವೇಳೆ ಸ್ವಲ್ಪ ಗೊಂದಲವಾಯ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಮನೆಯ ಬಳಿ ಹುಟ್ಟುಹಬ್ಬ ಆಚರಿಸದಂತೆ ಅಕ್ಕಪಕ್ಕದ ಮನೆಯವರು ಹಾಗೂ ಪೊಲೀಸರು ವಿನಂತಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಯನಗರದ ಎಂಇಎಸ್‌ ಮೈದಾನದಲ್ಲಿ ಸಿಗುತ್ತೇನೆ ಎಂದರು.

ಇನ್ನು ಈ ಬಾರಿಯ ಬಿಗ್‌ಬಾಸ್‌ ಕಾರ್ಯಕ್ರಮವನ್ನು ಸುದೀಪ್‌ ನಡೆಸಿಕೊಡುವುದು ಅನುಮಾನ ಎನ್ನುವ ಊಹಾಪೋಹದ ಬಗ್ಗೆ ಮಾತನಾಡಿದ ಅವರು, ಬಿಗ್‌ಬಾಸ್‌ ಹೊಸ ಆವೃತ್ತಿಯ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಕಾರ್ಯಕ್ರಮ ನಡೆಸಿಕೊಡುವಲ್ಲಿ ನನ್ನ ಭಾಗದಿಂದ ಹೆಚ್ಚು ಪ್ರಯತ್ನವಿದೆ. ಶೋ ಮಾಡಲು ಆಸಕ್ತಿಯೂ ಇದೆ. ಆದರೆ ಕೆಲವೊಮ್ಮೆ ನಾವು ಮುಂದುವರಿಯಬೇಕಾಗುತ್ತದೆ. ಅವರು ಹೊಸ ಮುಖ ಹುಡುಕಲಿ ಎಂದು ವೈಯಕ್ತಿಕವಾಗಿ ಬಯಸುತ್ತೇನೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

15 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

16 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

16 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

17 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

17 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

21 hours ago