ಹಾಸನ: ನಟ ಹಾಗೂ ನಿರ್ದೇಶಕ ತರುಣ್ ಸುಧೀರ್ ದಂಪತಿ ಅವರಿಂದು ಹಾಸನಾಂಬೆ ದೇವಿಯ ದರ್ಶನ ಪಡೆದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ದೇವಿ ಬಳಿ ಕೇಳಿಕೊಂಡಿದ್ದೇವೆ ಎಂದು ಹೇಳಿದರು.
ದರ್ಶನ್ ಅವರು ಇದ್ದಿದ್ದರೆ ತಪ್ಪದೇ ಹಾಸನಾಂಬೆ ದರ್ಶನಕ್ಕೆ ಬರುತ್ತಿದ್ದರು. ಆದಷ್ಟು ಬೇಗ ಎಲ್ಲಾ ಒಳ್ಳೆಯದಾಗಲಿ ಎಂದು ದೇವಿಯಲ್ಲಿ ಕೇಳಿಕೊಂಡಿದ್ದೇವೆ ಎಂದರು.
ಹಾಸನಾಂಬೆ ತಾಯಿ ದರ್ಶನಕ್ಕೆ ಬಂದಾಗ ಮನಸ್ಸಿನಲ್ಲಿ ಇರೋದನ್ನೆಲ್ಲಾ ಹೇಳಬೇಕು ಎನಿಸುತ್ತದೆ. ಇಲ್ಲಿ ಒಂದು ವೈಬ್ರೇಶನ್ ಇದೆ. ಪ್ರತಿ ವರ್ಷ ನಾನು ಹಾಸನಾಂಬೆ ದೇವಿ ದರ್ಶನಕ್ಕೆ ಬರುತ್ತೇನೆ ಎಂದು ಖುಷಿಪಟ್ಟರು.