ಮನರಂಜನೆ

ಅಗಲಿದ ಪತ್ನಿಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯ ತಿಳಿಸಿದ ವಿಜಯ್‌ ರಾಘವೇಂದ್ರ

ಬೆಂಗಳೂರು: ಅಗಲಿದ ಪತ್ನಿಗೆ ನಟ ವಿಜಯ್‌ ನಟ ವಿಜಯ್‌ ರಾಘವೇಂದ್ರ ವಿವಾಹ ವಾರ್ಷಿಕೋತ್ಸವದ ಶುಭಾಶಯ ತಿಳಿಸಿ ಭಾವುಕ ಪೋಸ್ಟ್‌ ಮಾಡಿದ್ದಾರೆ.

ಸ್ಯಾಂಡಲ್‌ವುಡ್‌ ನಟ ವಿಜಯ್‌ ರಾಘವೇಂದ್ರ ಮತ್ತು ಸ್ಪಂದನಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 17 ವರ್ಷಗಳು ಕಳೆದಿವೆ. ಈ ಹಿನ್ನೆಲೆಯಲ್ಲಿ ಅಗಲಿದ ಪತ್ನಿಯನ್ನು ನೆನೆದು ನಟ ವಿಜಯ್‌ ರಾಘವೇಂದ್ರ ಅವರು, ವಿವಾಹ ವಾರ್ಷಿಕೋತ್ಸವದ ಶುಭ ಕೋರಿ, ಭಾವುಕ ಪೋಸ್ಟ್‌ ಮಾಡಿದ್ದಾರೆ.

ಈ ಬಗ್ಗೆ ಇನ್ಸ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿರುವ ವಿಜಯ್‌ ರಾಘವೇಂದ್ರ ಅವರು, ಇಂದಿಗೆ 17 ವರ್ಷಗಳು. ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು ಚಿನ್ನ ಎಂದು ವಿಶ್‌ ಮಾಡಿ, ಸ್ಪಂದನಾ ಜೊತೆಗಿನ ಹಳೆ ಫೋಟೋ ಒಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿದ್ದಾರೆ.

ಪ್ರತಿ ವರ್ಷ ಸ್ಪಂದನಾ ಜೊತೆ ವಿಜಯ್‌ ರಾಘವೇಂದ್ರ ಅವರು ವಿವಾಹ ವಾರ್ಷಿಕೋತ್ಸವ ಆಚರಣೆ ಮಾಡುತ್ತಿದ್ದರು. ಆದರೆ  ಬ್ಯಾಂಕಾಕ್‌ನಲ್ಲಿ ಸ್ಪಂದನಾ ಹೃದಯಾಘಾತದಿಂದ ನಿಧನರಾದರು. ಈಗ ಸ್ಪಂದನಾ ಇಲ್ಲ ಎನ್ನುವ ನೋವು ವಿಜಯ್‌ ರಾಘವೇಂದ್ರ ಅವರಿಗೆ ಕಾಡುತ್ತಿದೆ. ಹೀಗಿದ್ದರೂ ಪತ್ನಿಗೆ ವಿಶ್‌ ಮಾಡೋದನ್ನು ಅವರು ಮರೆತಿಲ್ಲ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪೊನ್ನಂಪೇಟೆ | ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

ಮಡಿಕೇರಿ : ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು…

15 mins ago

PUC RESULT | ನಾಳೆ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ…

23 mins ago

ಅಮೆರಿಕ ಎದುರು 10ಷರತ್ತು ಮುಂದಿಟ್ಟಿ ಇರಾನ್ ; ಷರತ್ತು ಒಪ್ಪಿಕೊಳ್ಳುತ್ತಾ ಟ್ರಂಪ್‌ ಆಡಳಿತ?

ಟೆಹ್ರಾನ್‌ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…

2 hours ago

ಓದುಗರ ಪತ್ರ | ಬಸವರಾಜ ಬೊಮ್ಮಾಯಿ ನಿರ್ಧಾರ ಸ್ವಾಗತಾರ್ಹ

ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…

2 hours ago

ಓದುಗರ ಪತ್ರ | ಅಮಾನವೀಯ ಲಿಫ್ಟ್ ಸಂಸ್ಕೃತಿ ಅಂತ್ಯವಾಗಲಿ

ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್‌ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್‌ಗೆ ಲಿಫ್ಟ್…

2 hours ago

ಓದುಗರ ಪತ್ರ | ಅಂಚೆ ಕಚೇರಿಗಳು ಜನ ಸ್ನೇಹಿಯಾಗಲಿ

ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್‌ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…

2 hours ago