ಕೊಡಗು: ನಟಿ ಹರ್ಷಿಕಾ ಪೂನಚ್ಚ ಹಾಗೂ ಭುವನ್ ಜೋಡಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಹಿನ್ನೆಯಲ್ಲಿ ತಮ್ಮ ಸಾಂಪ್ರದಾಯಿಕ ಕೊಡವ ಶೈಲಿಯಲ್ಲಿ ಫೋಟೋ ಶೂಟ್ ಮಾಡಿಸಿಕೊಂಡಿದ್ದು, ಆ ಮೂಲಕ ಅಭಿಮಾನಿಗಳಿಗೆ ತಮ್ಮ ಮೊದಲ ಮಗುವಿನ ಆಗಮನದ ಬಗ್ಗೆ ಮಾಹಿತಿ ನೀಡಿದ್ದಾರೆ.
ಆಗಸ್ಟ್ 24, 2023ರಂದು ಭುವನ್ ಹಾಗು ಹರ್ಷಿಕಾ ಮದುವೆಯಾಗಿತ್ತು. ಮದುವೆಯಾದ ಬಳಿಕ ಹರ್ಷಿಕಾ ಯಾವುದೇ ಚಲನಚಿತ್ರಗಳಲ್ಲಿ ನಟಿಸಿಲ್ಲ. ಮನೆಯಲ್ಲಿಯೇ ಇದ್ದುಕೊಂಡು ಕೊಡವ ಆಹಾರ ಪದ್ಧತಿ ಹಾಗೂ ಉಡುಗೆ ಬಗೆಗಿನ ಮಾಹಿತಿಗಳನ್ನು ಯುಟೂಬ್‌ನಲ್ಲಿ ಹಂಚಿಕೊಂಡು ಅಭಿಮಾನಿಗಳ ಜತೆಯಲ್ಲಿದ್ದರು.
ಇದೀಗ ಮೊದಲ ಮಗುವಿನ ಆಗಮನವಾಗಲಿದ್ದು, ಈ ಸಂತಸ ವಿಷಯವನ್ನು ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಳೊಂದಿಗೆ ಹಂಚಿಕೊಂಡಿದ್ದಾರೆ ಹರ್ಷಿಕಾ.
ಈ ಸಂಬಂಧ ಕೊಡವ ಶೈಲಿಯಲ್ಲಿ ಫೋಟೋ ಶೂಟ್ ಮಾಡಿಸಿರು ಫೋಟೋ ಹಂಚಿಕೊಂಡು ತಮ್ಮ ಎಕ್ಸ್ ಖಾತೆಯಲ್ಲಿ ” ಗೆಳೆಯರೆ ,ಇಂದಿನವರೆಗು ನಮ್ಮಿಬ್ಬರಿಗೆ ಸದಾ ಆಶೀರ್ವಾದಿಸುತ್ತಾ ಬಂದಿದ್ದೀರಿ, ಇನ್ನು ಮುಂದೆ ನಿಮ್ಮ ಪ್ರೀತಿ ,ಆಶೀರ್ವಾದ ನಮ್ಮ ಈ ಇನ್ನೊಂದು ಪುಟ್ಟ ಜೀವದ ಮೇಲು ಇರಲಿ. ಅಕ್ಟೋಬರ್ ಗೆ ಕಾತುರದಿಂದ ಕಾಯುತ್ತಿದ್ದೇವೆ. ಇಂತಿ ನಿಮ್ಮ ಭುವನ್, ಹರ್ಷಿಕಾ” ಎಂದು ಬರೆದುಕೊಂಡು ತಾವು ತಾಯಿಯಾಗುತ್ತಿರುವ ವಿಷಯವನ್ನು ತಿಳಿಸಿದ್ದಾರೆ.
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…