ಬೆಂಗಳೂರು: ಬೆಂಗಳೂರಿನಲ್ಲಿ ಜಿ.ಆರ್ ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗಿನ ನಟಿ ಹೇಮಾ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ 2 ಬಾರಿ ಸಮನ್ಸ್ ನೀಡಿಯೂ ಯಾವುದೇ ಪ್ರತ್ಯುತ್ತರ ನೀಡದ ನಟಿಗೆ ವಿಚಾರಣೆಗೆ ಬಂದಿದ್ದ ವೇಳೆ ಬಂಧನವಾಗಿದೆ. ಇಂದು ವಿಚಾರಣೆಗೆ ಬಂದ ನಟಿ ಹೇಮಾ ಬುರ್ಖಾ ಧರಿಸಿ ಬಂದಿದ್ದರು. ವಿಚಾರಣೆ ವೇಳೆ ಅವರು ಸರಿಯಾದ ಮಾಹಿತಿ ನೀಡದ ಹಿನ್ನೆಲೆ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದರು.
ರೇವ್ ಪಾರ್ಟಿ ಸಂದರ್ಭದಲ್ಲಿ ನಾನು ಪಾರ್ಟಿ ಸ್ಥಳದಲ್ಲಿರಲಿಲ್ಲ. ನಾನು ಊರಿನಲ್ಲಿದ್ದೆ ಎಂದು ವಿಡಿಯೋ ತುಣುಕೊಂದನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಇದು ನ್ಯಾಯಾಲಯದ ದಿಕ್ಕು ತಪ್ಪಿಸಲು ಮಾಡಿದ ಪ್ರಯತ್ನ ಎಂದು ಆರೋಪಿಸಿ ಅವರನ್ನು ಬಂಧಿಸಲಾಗಿದೆ.
ಇಂದು ನಟಿ ಹೇಮಾ ಬಂಧನದ ಬಳಿಕ ಅವರನ್ನು ನಗರದ ಕೆ.ಸಿ ಜನರಲ್ ಆಸ್ಪತ್ರೆಗೆ ಮೆಡಿಕಲ್ ಪರೀಕ್ಷೆಗಾಗಿ ಕರೆದೊಯ್ದ ಸಿಸಿಬಿ ಪೊಲೀಸರು. ನಾಳೆ (ಜೂನ್.4) ಆನೆಕಲ್ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಲಿದ್ದಾರೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…