ಬೆಂಗಳೂರು: ನಗರದ ಜೆ.ಆರ್ ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗಿನ ನಟಿ ಹೇಮಾ ಅವರನ್ನು ಇಂದು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದರು.
ಅವರಿಗೆ ನಗರದ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ ಬಳಿಕ ಆನೆಕಲ್ 4ನೇ ಹೆಚ್ಚುವರಿ ಸಿವಿಲ್ ಜೆಎಂಎಫ್‌ಜಿ ನ್ಯಾಯಾಲಯದ ನ್ಯಾಯಾಧೀಶರಾದ ಎ.ಎಸ್ ಸಲ್ಮಾ ಅವರ ಬಳಿ ವಿಚಾರಣೆಗೆ ಕರೆದೊಯ್ದಿದ್ದು, ವಿಚಾರಣೆ ನಡೆಸಿದ ಜಡ್ಜ್ ನಟಿ ಹೇಮಾಗೆ ಜೂನ್. 14ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.
ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ 2 ಬಾರಿ ಸಮನ್ಸ್ ನೀಡಿಯೂ ಯಾವುದೇ ಪ್ರತ್ಯುತ್ತರ ನೀಡದ ನಟಿಗೆ ಮೂರನೇ ಬಾರಿಗೆ ವಿಚಾರಣೆಗೆ ಬಂದಿದ್ದ ವೇಳೆ ಬಂಧನವಾಗಿದೆ. ಇಂದು ವಿಚಾರಣೆಗೆ ಬಂದ ನಟಿ ಹೇಮಾ ಬುರ್ಖಾ ಧರಿಸಿ ಬಂದಿದ್ದರು. ವಿಚಾರಣೆ ವೇಳೆ ಅವರು ಸರಿಯಾದ ಮಾಹಿತಿ ನೀಡದ ಹಿನ್ನೆಲೆ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದರು.
ರೇವ್ ಪಾರ್ಟಿ ಸಂದರ್ಭದಲ್ಲಿ ನಾನು ಪಾರ್ಟಿ ಸ್ಥಳದಲ್ಲಿರಲಿಲ್ಲ. ನಾನು ಊರಿನಲ್ಲಿದ್ದೆ ಎಂದು ವಿಡಿಯೋ ತುಣುಕೊಂದನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಇದು ನ್ಯಾಯಾಲಯದ ದಿಕ್ಕು ತಪ್ಪಿಸಲು ಮಾಡಿದ ಪ್ರಯತ್ನ ಎಂದು ಆರೋಪಿಸಿ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಅವರಿಗೆ ಜೂನ್. 14ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆನೆಕಲ್ ನ್ಯಾಯಾಲಯ ಸೂಚಿಸಿದೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…