ಮನರಂಜನೆ

ನಟಿ ಪವಿತ್ರಾ ಜಯರಾಮ್‌ ಗೆಳೆಯ ಚಂದು ಆತ್ಮಹತ್ಯೆ

ಹೈದರಾಬಾದ್‌: ತ್ರಿನಯನಿ ಧಾರವಾಹಿ ಖ್ಯಾತಿಯ ನಟಿ ಪವಿತ್ರಾ ಜಯರಾಮ್‌ ಅವರು ಅಪಘಾತದಿಂದ ಮರಣಹೊಂದಿದ ಕೆಲವು ದಿನಗಳ ಬಳಿಕ ಅವರ ಗೆಳೆಯ ಚಂದು ಕೂಡಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಕೆಲವು ದಿನಗಳ ಹಿಂದೆ ಮಂಡ್ಯ ಮೂಲದ ನಟಿ ಪವಿತ್ರಾ ಜಯರಾಮ್‌ ಅವರು ಕಾರು ಅಪಘಾತದಲ್ಲಿ ಮರಣ ಹೊಂದಿದ್ದರು. ಅಪಘಾತ ನಡೆದಾಗ ಸಹನಟ/ಗೆಳೆಯ ಚಂದು ಕೂಡಾ ಅವರೊಂದಿಗೆ ಇದ್ದರು. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಇನ್ನು ಪವಿತ್ರಾ ಅವರ ಅಗಲಿಕೆಯಿಂದ ಚಂದು ದುಃಖಿತರಾಗಿದ್ದರು. ಇದರ ಬೆನ್ನಲ್ಲೇ ಅವರು ಆತ್ಮಹತ್ಯೆಗೆ ಶರಣಾಗಿರುವುದು ಅಚ್ಚರಿಗೆ ಕಾರಣವಾಗಿದೆ.

ಚಂದು ಅವರಿಗೆ 2015ರಲ್ಲಿ ತಮ್ಮ ಪ್ರಿಯತಮೆ ಜತೆ ಮದುವೆಯಾಗಿತ್ತು. ಈ ದಂಪತಿಗೆ ಇಬ್ಬರು ಮಕ್ಕಳಿದ್ದರು. ನಟಿ ಪವಿತ್ರಾ ನಿಧನ ಬಳಿಕ ಮನೊಂದಿದ್ದ ಚಂದು ಹೈದರಾಬಾದ್‌ನ ಮಣಿಕೊಂಡದಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಮಾತ್ರ ಈವರೆಗೆ ಗೊತ್ತಾಗಿಲ್ಲ. ಈ ಸಂಬಂಧ ನಾರಸಿಂಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ಸಿನಿಮಾ ಒಂದಕ್ಕೆ ಸಹಿ ಹಾಕಲು ನಟಿ ಪವಿತ್ರಾ ಜಯರಾಮ್‌ ಅವರು ಬೆಂಗಳೂರಿಗೆ ಬಂದಿದ್ದರು. ಬಳಿಕ ಬೆಂಗಳೂರಿನಿಂದ ಹೈದರಾಬಾದ್‌ಗೆ ಹಿಂತಿರುಗುವಾಗ ರಸ್ತೆ ಅಪಘಾತ ಸಂಭವಿಸಿ ನಟಿ ಮರಣ ಹೊಂದಿದರು. ಅವರ ಜತೆಯಲ್ಲಿದ್ದ ನಟ/ಗೆಳೆಯ ಚಂದು ಅವರಿಗೂ ಗಾಯಗಳಾಗಿದ್ದವು. ಈ ನೋವು ಮಾಸುವ ಮುನ್ನವೇ ನಟ ಚಂದು ಆತ್ಮಹತ್ಯೆ ಮಾಡಿಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

3 hours ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

3 hours ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

3 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

3 hours ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

3 hours ago

ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಸಂಕಷ್ಟ

ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…

3 hours ago