ಹೈದರಾಬಾದ್: ಮಾದಕ ವಸ್ತು ಖರೀದಿ ಹಾಗೂ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಖ್ಯಾತ ನಟಿ ತಮ್ಮನೊಬ್ಬನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ಬಾಲಿವುಡ್ ನಟಿ ರಾಕುಲ್ ಪ್ರೀತ್ ಸಿಂಗ್ ಅವರ ಸಹೋದರ ಅಮನ್ ಪ್ರೀತ್ ಸಿಂಗ್ ಅವರೇ ಮಾದಕವಸ್ತು ಪ್ರಕರಣದಲ್ಲಿ ಬಂಧಿತರಾಗಿರುವವರು.
ನಾರ್ಕೋಟಿಕ್ಸ್ ಬ್ಯೂರೋ ಹಾಗೂ ರಾಜೇಂದ್ರ ನಗರ ಎಸ್‌ಒಟಿ ಪೊಲೀಸ್ ಅಧಿಕಾರಿಗಳ ಜಂಟಿ ಕಾರ್ಯಚರಣೆ ವೇಳೆ ಸೈಬರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಕುಲ್ ಪ್ರೀತ್ ಅವರ ಸಹೋದರನ ಬಂಧನವಾಗಿದೆ.
ಅಮನ್‌ಪ್ರೀತ್ ಅವರು ನೈಜೀರಿಯಾ ಮೂಲದ ನಾಲ್ವರಿಂದ ಕೊಕೇನ್ ಖರೀದಿಸುತ್ತಿದ್ದರು. ಈ ವೇಳೆ ಜಂಟಿ ಕಾರ್ಯಾಚರಣೆ ಮಾಡಿದ ಪೊಲೀಸರು ಎರಡು ಕೋಟಿ ಮೌಲ್ಯದ 200 ಗ್ರಾಂ ಕೊಕೇನ್ ಅನ್ನು ವಶಪಡಸಿಕೊಂಡಿದ್ದು, ಅಮನ್ ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ.
ಈ ಹಿಂದೆ ರಾಕುಲ್ ಪ್ರೀತ್ ಕೂಡಾ ಮಾದಕವಸ್ತು ಸೇವನೆ ಹಾಗೂ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಇಂದ ವಿಚಾರಣೆ ಎದುರಿಸಿದ್ದರು.





