ಮನರಂಜನೆ

ಕೊಕೇನ್‌ ಖರೀದಿಸುವ ವೇಳೆ ಪೊಲೀಸರ ಅತಿಥಿಯಾದ ಬಿಟೌನ್‌ ಬೆಡಗಿ ತಮ್ಮ!

ಹೈದರಾಬಾದ್‌: ಮಾದಕ ವಸ್ತು ಖರೀದಿ ಹಾಗೂ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ಖ್ಯಾತ ನಟಿ ತಮ್ಮನೊಬ್ಬನನ್ನು ಹೈದರಾಬಾದ್‌ ಪೊಲೀಸರು ಬಂಧಿಸಿದ್ದಾರೆ.

ಬಾಲಿವುಡ್‌ ನಟಿ ರಾಕುಲ್‌ ಪ್ರೀತ್‌ ಸಿಂಗ್‌ ಅವರ ಸಹೋದರ ಅಮನ್‌ ಪ್ರೀತ್‌ ಸಿಂಗ್‌ ಅವರೇ ಮಾದಕವಸ್ತು ಪ್ರಕರಣದಲ್ಲಿ ಬಂಧಿತರಾಗಿರುವವರು.

ನಾರ್ಕೋಟಿಕ್ಸ್‌ ಬ್ಯೂರೋ ಹಾಗೂ ರಾಜೇಂದ್ರ ನಗರ ಎಸ್‌ಒಟಿ ಪೊಲೀಸ್‌ ಅಧಿಕಾರಿಗಳ ಜಂಟಿ ಕಾರ್ಯಚರಣೆ ವೇಳೆ ಸೈಬರಾಬಾದ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ರಾಕುಲ್‌ ಪ್ರೀತ್‌ ಅವರ ಸಹೋದರನ ಬಂಧನವಾಗಿದೆ.

ಅಮನ್‌ಪ್ರೀತ್‌ ಅವರು ನೈಜೀರಿಯಾ ಮೂಲದ ನಾಲ್ವರಿಂದ ಕೊಕೇನ್‌ ಖರೀದಿಸುತ್ತಿದ್ದರು. ಈ ವೇಳೆ ಜಂಟಿ ಕಾರ್ಯಾಚರಣೆ ಮಾಡಿದ ಪೊಲೀಸರು ಎರಡು ಕೋಟಿ ಮೌಲ್ಯದ 200 ಗ್ರಾಂ ಕೊಕೇನ್‌ ಅನ್ನು ವಶಪಡಸಿಕೊಂಡಿದ್ದು, ಅಮನ್‌ ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ.

ಈ ಹಿಂದೆ ರಾಕುಲ್‌ ಪ್ರೀತ್‌ ಕೂಡಾ ಮಾದಕವಸ್ತು ಸೇವನೆ ಹಾಗೂ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಇಂದ ವಿಚಾರಣೆ ಎದುರಿಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

2 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

2 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

5 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

5 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

5 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

6 hours ago