ಮನರಂಜನೆ

ಚೌಕಿದಾರ್’ ಚಿತ್ರದಲ್ಲಿ ‘ಚೈತ್ರದ ಪ್ರೇಮಾಂಜಲಿ’ ಖ್ಯಾತಿಯ ಶ್ವೇತಾ

ಎರಡು ದಶಕಗಳ ಹಿಂದೆ ‘ಚೈತ್ರದ ಪ್ರೇಮಾಂಜಲಿ’, ‘ಕರ್ಪೂರದ ಗೊಂಬೆ’, ‘ಲಕ್ಷ್ಮಿ ಮಹಾಲಕ್ಷ್ಮಿ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಶ್ವೇತಾ, ಇದೀಗ ಹಲವು ವರ್ಷಗಳ ನಂತರ ಮತ್ತೊಮ್ಮೆ ಕನ್ನಡ ಚಿತ್ರವೊಂದರಲ್ಲಿ ನಟಿಸಿದ್ದಾರೆ.

ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ವಿನೋದಿನಿ ಎಂಬ ಹೆಸರಿನಿಂದ ಜನಪ್ರಿಯವಾಗಿರುವ ಶ್ವೇತಾ, ಕನ್ನಡ ಚಿತ್ರರಂಗದಿಂದ ದೂರವಿದ್ದರೂ, ತಮಿಳು ಚಿತ್ರಗಳು ಮತ್ತು ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದರು. ಸದ್ಯ, ‘ಲಕ್ಷ್ಮಿ ನಿವಾಸ’ ಎಂಬ ಧಾರಾವಾಹಿ ಮೂಲಕ ಅವರು ಕನ್ನಡಕ್ಕೆ ವಾಪಸ್ಸಾಗಿದ್ದರು. ಖಾಸಗಿ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರವಾಗುತ್ತಿದ್ದು, ಶ್ವೇತಾ ಪಾತ್ರ ಮತ್ತು ನಟನೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಹೀಗಿರುವಾಗಲೇ, ಚಂದ್ರಶೇಖರ್‍ ಬಂಡಿಯಪ್ಪ ನಿರ್ದೇಶನದ ‘ಚೌಕಿದಾರ್‍’ ಚಿತ್ರದಲ್ಲಿ ಶ್ವೇತಾ ನಟಿಸುತ್ತಿದ್ದಾರೆ. 2003ರಲ್ಲಿ ತೆರೆಕಂಡ ‘ಕುಟುಂಬ’ ಸಿನಿಮಾದಲ್ಲಿ ಶ್ವೇತಾ ಕೊನೆಯ ಬಾರಿಗೆ ಅಭಿನಯಿಸಿದ್ದರು. 20 ವರ್ಷಗಳ ವಿರಾಮದ ನಂತರ ನಟನೆಗೆ ಮರಳಿದ್ದಾರೆ. ತಮ್ಮ ವೃತ್ತಿ ಜೀವನದಲ್ಲಿ ಹೊಸ ಅಧ್ಯಾಯವನ್ನು ಸಣ್ಣ ಪರದೆಯ ಮೂಲಕ ಮತ್ತೆ ಆರಂಭಿಸಿದ್ದು, ಇದೀಗ ಬಹಳ ಇಷ್ಟಪಟ್ಟು ‘ಚೌಕಿದಾರ್’ ಸಿನಿಮಾ ಒಪ್ಪಿಕೊಂಡಿದ್ದಾರೆ.

ಇದುವರೆಗೂ ಪ್ರೇಮಕಥೆಗಳಲ್ಲೇ ಹೆಚ್ಚಾಗಿ ಅಭಿನಯಿಸಿದ್ದ ಪೃಥ್ವಿ ಅಂಬಾರ್, ‘ಚೌಕಿದಾರ್’ ಚಿತ್ರದಲ್ಲಿ ಮಾಸ್‍ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರಿಗೆ ನಾಯಕಿಯಾಗಿ ಧನ್ಯಾ ರಾಮ್‍ಕುಮಾರ್‍ ಅಭಿನಯಿಸುತ್ತಿದ್ದಾರೆ. ವಿಶೇಷ ಪಾತ್ರಗಳಲ್ಲಿ ಸಾಯಿಕುಮಾರ್ ಮತ್ತು ಧರ್ಮ ನಟಿಸುತ್ತಿದ್ದಾರೆ.

‘ಚೌಕಿದಾರ್‍’ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಸಚಿನ್ ಬಸ್ರೂರು ಸಂಗೀತ ಸಂಯೋಜಿಸುತ್ತಿದ್ದಾರೆ. ಸಿದ್ದು ಕಂಚನಹಳ್ಳಿ ಛಾಯಾಗ್ರಹಣ ಈ ಚಿತ್ರಕ್ಕಿದೆ. ಬಹುಭಾಷೆಯಲ್ಲಿ ಮೂಡಿಬರುತ್ತಿರುವ ಈ ಚಿತ್ರವನ್ನು ಕಲ್ಲಹಳ್ಳಿ ಚಂದ್ರಶೇಖರ್, VS ಎಂಟರ್ ಟೈನ್ಮೆಂಟ್ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ 5000 ದಂಡ, 3 ವರ್ಷ ಜೈಲು ಶಿಕ್ಷೆ

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್‌ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…

36 mins ago

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…

44 mins ago

ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…

55 mins ago

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…

1 hour ago

ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಗ್ಯಾರಂಟಿ ಯೋಜನೆ ವಿರೋಧಿಸಿಲ್ಲ: ಸಚಿವ ಚಲುವರಾಯಸ್ವಾಮಿ

ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…

1 hour ago

ಕೊಡಗು| ಆಸ್ತಿ ವಿಚಾರಕ್ಕೆ ಕಲಹ: ಅಣ್ಣನ ಮಗನ ಮೇಲೆ ಗುಂಡಿನ ದಾಳಿ

ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…

2 hours ago