ಮನರಂಜನೆ

ಕನ್ನಡ ಆಯ್ತು, ಇದೀಗ ತೆಲುಗು ‘ಬಿಗ್‍ ಬಾಸ್‍’ಗೆ ಎಂಟ್ರಿ ಕೊಟ್ಟ ಸಂಜನಾ ಗಲ್ರಾನಿ

ನಟಿ ಸಂಜನಾ ಗಲ್ರಾನಿ, ಕೆಲವು ವರ್ಷಗಳ ಹಿಂದೆ ‘ಬಿಗ್‍ ಬಾಸ್‍ ಕನ್ನಡ’ದ ಮೊದಲ ಸೀಸನ್‍ನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದು ಗೊತ್ತೇ ಇದೆ. ಇದೀಗ ಅವರು ‘ಬಿಗ್ ಬಾಸ್ ತೆಲುಗು – ಸೀಸನ್ 9’ರ 10ನೇ ಸ್ಪರ್ಧಿಯಾಗಿ ಮನೆಗೆ ಎಂಟ್ರಿ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ.

ಸಂಜನಾ, ಕನ್ನಡವಲ್ಲದೆ ತೆಲುಗಿನಲ್ಲೂ ಚಿರಪರಿಚಿತ ಮುಖ. ‘ಗಂಡ ಹೆಂಡತಿ’ ಚಿತ್ರದ ಮೂಲಕ ಕನ್ನಡದಲ್ಲಿ ನಟಿಸುವ ಮೊದಲೇ ಅವರು ‘ಸೊಗ್ಗಾಡು’ ಎಂಬ ಚಿತ್ರದಲ್ಲಿ ನಟಿಸಿದ್ದರು. ಆ ನಂತರ, ಪ್ರಭಾಸ್‍ ಅಭಿನಯದ ‘ಬುಜ್ಜಿಗಾಡು’, ‘ಸತ್ಯಮೇವ ಜಯತೇ’ ಮುಂತಾದ ಹಲವು ಚಿತ್ರಗಳಲ್ಲಿ ನಟಿಸಿದ್ದರು. 2017ರಲ್ಲಿ ಬಿಡುಗಡೆಯಾದ ಸುನೀಲ್‍ ಅಭಿನಯದ ‘2 ಕಂಟ್ರೀಸ್‍’ ಚಿತ್ರದಲ್ಲಿ ನಟಿಸಿದ ಮೇಲೆ ಅವರು ಯಾವುದೇ ತೆಲುಗು ಚಿತ್ರದಲ್ಲೂ ನಟಿಸಿರಲಿಲ್ಲ.

ಕೆಲವು ವರ್ಷಗಳ ಹಿಂದೆ ಮದುವೆ, ಮಗು ಆದ ಮೇಲೆ ಸಂಜನಾ, ಕನ್ನಡದಲ್ಲೂ ಯಾವುದೇ ಚಿತ್ರದಲ್ಲಿ ನಟಿಸಿರಲಿಲ್ಲ. ಸೋಶಿಯಲ್ ಮೀಡಿಯಾಗಳಲ್ಲಿ ಮಾತ್ರ ಸಕ್ರಿಯವಾಗಿದ್ದ ಅವರು, ಇದೀಗ ತೆಲುಗಿನ ‘ಬಿಗ್ ಬಾಸ್’ ವೇದಿಕೆ ಮೇಲೆ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.

ಕನ್ನಡದ ‘ಬಿಗ್‍ ಬಾಸ್‍’ ಕಾರ್ಯಕ್ರಮವು ಸೆ.28ರಿಂದ ಪ್ರಾರಂಭವಾಗಲಿದೆ. ಅದಕ್ಕೂ ಮೊದಲು ಶನಿವಾರ, ತೆಲುಗಿನ ಒಂಭತ್ತನೇ ಸೀಸನ್‍ ಪ್ರಾರಂಭವಾಗಿದೆ. ಈ ಕಾರ್ಯಕ್ರಮವನ್ನು ತೆಲುಗಿನ ಜನಪ್ರಿಯ ನಟ ಅಕ್ಕಿನೇನಿ ನಾಗಾರ್ಜುನ ನಡೆಸಿಕೊಡುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ 15 ಸ್ಪರ್ಧಿಗಳು ಭಾಗವಹಿಸುತ್ತಿದ್ದು, ಅದರಲ್ಲಿ ಸಂಜನಾ ಸಹ ಒಬ್ಬರು.

ಸಂಜನಾ ಇತ್ತೀಚೆಗಷ್ಟೇ ಗಂಡು ಮಗುವಿಗೆ ಜನ್ಮ ನೀಡಿದ್ದರು. ನಾಲ್ಕು ತಿಂಗಳ ಮಗುವನ್ನು ಬಿಟ್ಟು, ಸಂಜನಾ ಇದೀಗ ‘ಬಿಗ್‍ ಬಾಸ್‍’ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ‘ಬಿಗ್‍ ಬಾಸ್‍’ ಮನೆಯಲ್ಲಿ ಇರುವಷ್ಟು ದಿನ ತನ್ನ ತಂದೆ – ತಾಯಿ ಮನೆಯಲ್ಲಿದ್ದು ಮಗುವನ್ನು ನೋಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ಈ ಬಾರಿಯ ತೆಲುಗು ‘ಬಿಗ್ ಬಾಸ್’ನಲ್ಲಿ ಸಂಜನಾ ಅಲ್ಲದೆ, ಫ್ಲೋರಾ ಸೈನಿ, ಕಲ್ಯಾನ್ ಪದಲ, ತನುಜಾ ಗೌಡ, ಶಾಸ್ತ್ರಿ ವರ್ಮ, ಜಬರ್ದಸ್ಥ್ ಎಮಾನ್ಯುಯೆಲ್, ಹರಿತ ಹರೀಷ್, ರಿತು ಚೌಧರಿ, ಡಿಮಾನ್ ಪವನ್, ಭರಣಿ ಶಂಕರ್, ರಾಮು ರಾಥೋಡ್ ಸೇರಿದಂತೆ ಮುಂತಾದವರು ಸ್ಪರ್ಧಿಗಳಾಗಿ ಭಾಗವಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago