ಮನರಂಜನೆ

ಮಗ ಆಯ್ತು, ಇದೀಗ ಅಪ್ಪನೂ ಹೀರೋ!; ‘ಶಿಲ್ಪಾ ಶ್ರೀನಿವಾಸ್’ ಚಿತ್ರಕ್ಕೆ ಚಾಲನೆ

ಕೆಲವು ವರ್ಷಗಳ ಹಿಂದೆ ಸಾ.ರಾ. ಗೋವಿಂದು, ಓಂ ಪ್ರಕಾಶ್‍ ರಾವ್, ಎಸ್‍. ಮಹೇಂದರ್‍, ಬಸಂತ್‍ ಕುಮಾರ್‍ ಪಾಟೀಲ್‍ ಮುಂತಾದ ಹಲವು ನಿರ್ಮಾಪಕರು, ನಿರ್ದೇಶಕರೆಲ್ಲಾ ಹೀರೋಗಳಾಗಿ ಜನರನ್ನು ರಂಜಿಸುವ ಪ್ರಯತ್ನವನ್ನು ಮಾಡಿದ್ದರು. ಈಗ ಆ ಸಾಲಿಗೆ ಹಿರಿಯ ನಿರ್ಮಾಪಕ ಮತ್ತು ವಿತರಕ ಶಿಲ್ಪಾ ಶ್ರೀನಿವಾಸ್ ಸಹ ಸೇರಿದ್ದಾರೆ.

‘ಉಪೇಂದ್ರ’, ‘ಪರ್ವ’ ಮುಂತಾದ ಬಿಗ್‍ ಬಜೆಟ್‍ ಚಿತ್ರಗಳನ್ನು ನಿರ್ಮಿಸುವುದರ ಜೊತೆಗೆ ವಿತರಕರಾಗಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರಾಗಿರುವ ಶಿಲ್ಪ ಶ್ರೀನಿವಾಸ್‍, ಇದೀಗ ಹೀರೋ ಆಗಿದ್ದಾರೆ. ಚಿತ್ರದ ಹೆಸರು ಸಹ ‘ಶಿಲ್ಪಾ ಶ್ರೀನಿವಾಸ್’ ಎನ್ನುವುದು ವಿಶೇಷ. ಇತ್ತೀಚೆಗೆ ಈ ಚಿತ್ರಕ್ಕೆ ಹೊಸಕೊಟೆಯ ಗಟ್ಟಿಗನಬ್ಬೆಯಲ್ಲಿ‌ ಚಾಲನೆ ದೊರೆಯಿತು. ನಟ-ಸಂಕಲನಕಾರ ನಾಗೇಂದ್ರ ಅರಸ್ ಅವರು ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು.

ವಿಶೇಷವೆಂದರೆ, ಕಳೆದ ವರ್ಷ ಶಿಲ್ಪಾ ಶ್ರೀನಿವಾಸ್‍ ಮಗ ಭರತ್‍, ‘ಮೆಜೆಸ್ಟಿಕ್‍ 2’ ಎಂಬ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಆ ಚಿತ್ರದ ಚಿತ್ರೀಕರಣ ಮುಗಿದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಮಗನ ಚಿತ್ರ ಬಿಡುಗಡೆಯಾಗುವುದಕ್ಕೆ ಮೊದಲೇ ಅಪ್ಪನ ಚಿತ್ರ ಸಹ ಪ್ರಾರಂಭವಾಗಿದೆ.

ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ‘ಮುಗಿಲ ಮಲ್ಲಿಗೆ’ ಚಿತ್ರದ ನಿರ್ದೇಶಕ ಆರ್ .ಕೆ. ಗಾಂಧಿ, ‘ಶಿಲ್ಪಾ ಶ್ರೀನಿವಾಸ್’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಲಿದ್ದಾರೆ. ಅನಿರುದ್ಧ ಶಾಸ್ತ್ರಿ ಸಂಗೀತ, ಪ್ರಮೋದ್ ಭಾರತೀಯ ಅವರ ಛಾಯಾಗ್ರಹಣ ಇರುವ ಈ ಚಿತ್ರದಲ್ಲಿ ಕಿಶೋರ್ ಕಾಸರಗೋಡು, ಸ್ವಾತಿ ಲಿಂಗರಾಜ್, ಪ್ರಿಯಾಂಕ, ಶೋಭರಾಜ್, ನಾಗೇಂದ್ರ ಅರಸ್ ಮುಂತಾದವರು ನಟಿಸುತ್ತಿದ್ದಾರೆ.

ಹೊಸಕೋಟೆ, ಚಿಕ್ಕಬಳ್ಳಾಪುರ ಅಲ್ಲದೆ ಬೆಂಗಳೂರಲ್ಲಿ ಒಟ್ಟು ಎರಡು ಹಂತಗಳಲ್ಲಿ ‘ಶಿಲ್ಪಾ ಶ್ರೀನಿವಾಸ್’ ಚಿತ್ರದ ಚಿತ್ರೀಕರಣ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ ದಸರಾ 2026: ಅ.15ರಿಂದ ವೈಭವದ ಆಚರಣೆ, ಆಕರ್ಷಕ ಲೋಗೋ ಬಿಡುಗಡೆ

ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.‌15ರಂದು ಖ್ಯಾತ ನಟ ವಿ.ರವಿಚಂದ್ರನ್‌ ಅವರು…

1 hour ago

ಅಮೃತ್ ೨.೦ ಯೋಜನೆಗೆ ನಾಗರಿಕರ ಅಸಮಾಧಾನ

ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ  ಸರಗೂರು: ಪಟ್ಟಣದ…

1 hour ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದು: ಮುಖ್ಯಮಂತ್ರಿಗಳು ಶೀಘ್ರ ನಿರ್ಧಾರ ಕೈಗೊಳ್ಳಲಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…

1 hour ago

ಓದುಗರ ಪತ್ರ: ಸಮಾಜವನ್ನು ಜಾಗೃತಗೊಳಿಸುವ ಚಿತ್ರಗಳನ್ನು ದುನಿಯಾ ವಿಜಿ ಹೆಚ್ಚಾಗಿ ನಿರ್ದೇಶಿಸಲಿ

ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…

1 hour ago

ಓದುಗರ ಪತ್ರ: ಗವಿಸಿದ್ಧೇಶ್ವರ ಶ್ರೀಗಳಿಂದ ದಸರಾ ಉದ್ಘಾಟನೆ: ಸಿಎಂ ನಿರ್ಧಾರ ಶ್ಲಾಘನೀಯ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…

1 hour ago

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

2 hours ago