ನಂದಮೂರಿ ಬಾಲಕೃಷ್ಣ ನಟನೆಯ ‘ಅಖಂಡ 2’ ಚಿತ್ರವು ‘ಅಖಂಡ’ ಚಿತ್ರದ ಮುಂದುವರಿದ ಭಾಗವಾಗಿದ್ದು, ಡಿ. 05ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿಕ್ಕಬಳ್ಳಾಪುರದ ಚಿಂತಾಮಣಿಯ ಚಿನ್ನಸಂದ್ರ ಬಳಿ ಬೃಹತ್ ವೇದಿಕೆ ಹಾಕಿ ಟ್ರೇಲರ್ ಬಿಡುಗಗಡೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಶಿವರಾಜಕುಮಾರ್ ವಿಶೇಷ ಅತಿಥಿಯಾಗಿ ಭಾಗಿಯಾಗಿ ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಾಹಸ ನಿರ್ದೇಶಕ ರವಿ ವರ್ಮಾ, ಅಯ್ಯಪ್ಪ ಹಾಗೂ ಶರತ್ ಲೋಹಿತಾಶ್ವ ಸೇರಿದಂತೆ ಹಲವರು ಭಾಗವಹಿಸಿದ್ದರು.
ಇದನ್ನು ಓದಿ: IFFI ಗಾಲಾ ಪ್ರೀಮಿಯರ್ ನಲ್ಲಿ ಕನ್ನಡದ’ರುಧಿರ್ವನ’ ಪ್ರದರ್ಶನ
ಟ್ರೇಲರ್ ಬಿಡುಗಡೆ ಬಳಿಕ ಮಾತನಾಡಿದ ಶಿವರಾಜಕುಮಾರ್, ‘ನನ್ನ ಅಣ್ಣನ ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಬಂದಿದ್ದೇನೆ. ನಾವು ಒಂದೇ ಕುಟುಂಬ. ಇವರ ತಂದೆ ನನಗೆ ದೊಡ್ಡಪ್ಪ. ಬಾಲಯ್ಯ ನನಗೆ ಅಣ್ಣ. ಇವರ ಕಾರ್ಯಕ್ರಮಕ್ಕೆ ಬರುವುದು ನಮಗೆ ಖುಷಿಯಾಗುತ್ತದೆ’ ಎಂದರು.
ಕನ್ನಡ ಜನತೆಗೆ ನಮಸ್ಕಾರ ಎಂದು ಕನ್ನಡದಲ್ಲಿ ಮಾತು ಪ್ರಾರಂಭಿಸಿದ ನಂದಮೂರಿ ಬಾಲಕೃಷ್ಣ, ‘ಶಿವಣ್ಣ ನನ್ನ ತಮ್ಮನ ತರಹ. ನಮ್ಮ ‘ಅಖಂಡ 2’ ಚಿತ್ರವು ಡಿ. 05ರಂದು ಬಿಡುಗಡೆಯಾಗುತ್ತಿದೆ. ‘ಅಖಂಡ 2’ ಚಿತ್ರವು ಕೇವಲ ತೆಲುಗು, ಕನ್ನಡ ಸಿನಿಮಾವಲ್ಲ. ಇದು ಪ್ಯಾನ್ ಇಂಡಿಯಾ ಸಿನಿಮಾ’ ಎಂದು ಹೇಳಿದರು.
ಬೋಯಪಾಟಿ ಶ್ರೀನು ನಿರ್ದೇಶನದ ಫ್ಯಾಂಟಸಿ ಆಕ್ಷನ್ ಥ್ರಿಲ್ಲರ್ ಸಿನಿಮಾ ಇದು. ತಮನ್ ಸಂಗೀತ ಸಂಯೋಜಿಸಿರುವ ಈ ಚಿತ್ರವನ್ನು 14 ರೀಲ್ಸ್ ಪ್ಲಸ್ ಬ್ಯಾನರ್ ಮೂಲಕ ನಿರ್ಮಾಣ ಆಗುತ್ತಿದೆ. ರಾಮ್ ಅಚಂತ ಹಾಗೂ ಗೋಪಿಚಂದ್ ಅಚಂತ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬಾಲಯ್ಯ ಅವರಿಗೆ ಜೋಡಿಯಾಗಿ ಸಂಯುಕ್ತಾ ಮೆನನ್ ನಟಿಸಿದ್ದು, ಆದಿ ಪಿನಿಸೆಟ್ಟಿ ಖಳನಾಯಕನಾಗಿ ನಟಿಸಿದ್ದಾರೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…