ಮನರಂಜನೆ

ಎಂಟು ವರ್ಷಗಳ ನಂತರ ವಾಪಸ್ಸಾದ ಅಮೂಲ್ಯ: ‘ಪೀಕಬೂ’ ಚಿತ್ರದಲ್ಲಿ ನಟನೆ

ಮದುವೆಯಾಗಿ ಗಂಡ-ಮನೆ-ಮಕ್ಕಳು ಎಂದು ಬ್ಯುಸಿಯಾಗಿದ್ದ ಅಮೂಲ್ಯ, ಇದೀಗ ಮತ್ತೆ ನಟನೆಗೆ ಮರಳಿದ್ದಾರೆ. 2017ರಲ್ಲಿ ಬಿಡುಗಡೆಯಾದ ‘ಮುಗುಳು ನಗೆ’ ಚಿತ್ರದಲ್ಲೊಂದು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇ ಕಡಿಮೆ. ಆ ನಂತರ ಅಮೂಲ್ಯ ಯಾವುದೇ ಚಿತ್ರದಲ್ಲೂ ನಟಿಸಿರಲಿಲ್ಲ. ಇದೀಗ ಅವರು ‘ಪೀಕಬೂ’ ಎಂಬ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಅಂದಹಾಗೆ, ಅಮೂಲ್ಯ ಅವರನ್ನು ವಾಪಸ್ಸು ಕರೆತರುತ್ತಿರುವುದು ನಿರ್ದೇಶಕ ಮಂಜು ಸ್ವರಾಜ್‍. ಸದ್ಯ, ‘ಸರಳ ಸುಬ್ಬರಾವ್‍’ ಎಂಬ ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿರುವ ಮಂಜು ಸ್ವರಾಜ್‍, ದಶಕದ ಹಿಂದೆ ‘ಶ್ರಾವಣಿ ಸುಬ್ರಹ್ಮಣ್ಯ’ ಚಿತ್ರವನ್ನು ನಿರ್ದೇಶಿಸಿದ್ದರು. ಗಣೇಶ್‍ ಮತ್ತು ಅಮೂಲ್ಯ ಅಭಿನಯದ ಈ ಚಿತ್ರವು ಶತದಿನ ಕಂಡಿತ್ತು.

ಇದನ್ನು ಓದಿ: ಮೂರ್ನಾಲ್ಕು ವರ್ಷಗಳ ನಂತರ ಕೃಷ್ಣ ಡ್ಯಾನ್ಸ್ ಮಾಡಿದ ಹಾಡೊಂದು ಬಿಡುಗಡೆ

ಇದೀಗ ಅಮೂಲ್ಯ ಅವರನ್ನು ಪುನಃ ಚಿತ್ರರಂಗಕ್ಕೆ ಕರೆತರುತ್ತಿದ್ದಾರೆ ಮಂಜು ಸ್ವರಾಜ್. ಭಾನುವಾರ, ಅಮೂಲ್ಯ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ‘ಪೀಕಬೂ’ ಚಿತ್ರದ ಘೋಷಣೆಯಾಗಿದೆ. ಹೊಸ ಟೀಸರ್ ಬಿಡುಗಡೆ ಮಾಡುವ ಮೂಲಕ ಈ ಚಿತ್ರದ ಘೋಷಣೆಯಾಗಿದೆ. ಚಾರ್ಲಿ ಚಾಪ್ಲಿನ್‍ ಶೈಲಿಯಲ್ಲಿ ಅಮೂಲ್ಯ ನೃತ್ಯ ಮಾಡುವ ಸನ್ನಿವೇಶಗಳು ಈ ಟೀಸರ್‍ನಲ್ಲಿದ್ದು, ವಿ. ನಾಗೇಂದ್ರ ನೃತ್ಯ ನಿರ್ದೇಶನ ಮಾಡಿದ್ದಾರೆ.

‘ಪೀಕಬೂ’ ಎಂದರೆ ಕಣ್ಣಾಮುಚ್ಚಾಲೆ ಎಂದರ್ಥ. ಕಮರ್ಷಿಯಲ್‍ ಅಂಶಗಳ ಜೊತೆಗೆ ಸಂದೇಶವಿರುವಂತಹ ಚಿತ್ರವಿದು. ಈ ಚಿತ್ರದಲ್ಲಿ ಅಮೂಲ್ಯ ನಾಯಕಿಯಾಗಿ ನಟಿಸುತ್ತಿದ್ದು, ನಾಯಕ ಯಾರು ಎಂಬ ವಿಷಯವನ್ನು ಚಿತ್ರತಂಡ ಬಹಿರಂಗಗೊಳಿಸಿಲ್ಲ. ಈ ಚಿತ್ರಕ್ಕೆ ಸುರೇಶ್‍ ಬಾಬು ಛಾಯಾಗ್ರಹಣ ಮತ್ತು ವೀರ್‍ ಸಮರ್ಥ್‍ ಸಂಗೀತವಿದೆ.

‘ಪೀಕಬೂ’ ಚಿತ್ರವನ್ನು ಶ್ರೀ ಕೆಂಚಾಂಬಾ ಫಿಲಂಸ್‌ ಅಡಿಯಲ್ಲಿ ಗಣೇಶ್‌ ನಿರ್ಮಾಣ ಮಾಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

39 mins ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

42 mins ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

44 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

48 mins ago

ಮೂಗಿನ ನೇರಕ್ಕೆ ಇತಿಹಾಸವನ್ನು ತಿರುಚುವುದಿದೆಯಲ್ಲಾ….

‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…

54 mins ago

ಸಂವಿಧಾನ ನಮ್ಮ ಬಳಿ ಇದೆ, ಆದರೆ ಅದರ ಧ್ವನಿ ಎಲ್ಲಿದೆ?

ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…

58 mins ago