ಕನ್ನಡದ ನಟಿ, ಸ್ಟಾರ್ ನಿರೂಪಕಿ ಅನುಶ್ರೀ ಅವರಿಂದು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ 10.56ಕ್ಕೆ ರೋಷನ್ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.
ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್ ಜೊತೆ ಅನುಶ್ರೀ ವಿವಾಹ ಆಗಿದ್ದಾರೆ. ಇನ್ನೂ ನಿರೂಪಕಿ ಅನುಶ್ರೀ ಹಾಗೂ ರೋಷನ್ ಅದ್ಧೂರಿ ಮದುವೆಗೆ ಸ್ಟಾರ್ ನಟ-ನಟಿಯರು ಬಂದು ನವಜೋಡಿಗೆ ಶುಭ ಹಾರೈಸಿದ್ದಾರೆ.
ನಾದಬ್ರಹ್ಮ ಹಂಸಲೇಖ, ಶರಣ್, ಸೋನಲ್ ಮಂಥೆರೋ, ವಿಜಯ್ ರಾಘವೇಂದ್ರ ಸೇರಿದಂತೆ ಮುಂತಾದವರು ಅನುಶ್ರೀ-ರೋಷನ್ ಕಲ್ಯಾಣಕ್ಕೆ ಸಾಕ್ಷಿಯಾಗಿದ್ದರು.
ಇನ್ನು ಅನುಶ್ರೀ ಕೊರಳಿಗೆ ರೋಷನ್ ಮಾಂಗಲ್ಯಧಾರಣೆ ಮಾಡುವ ವೇಳೆ ಅನುಶ್ರೀ ತಾಳಿಯನ್ನು ಬಿಗಿ ಹಿಡಿದು ಭಾವುಕರಾದರು. ಪತ್ನಿ ಕಣ್ಣಾಲಿಗಳು ಒದ್ದೆಯಾಗಿದ್ದನ್ನು ಕಂಡ ರೋಷನ್ ಅನುಶ್ರೀ ಅವರನ್ನು ಸಮಾಧಾನ ಮಾಡಿದ್ದಾರೆ.





