Mysore
19
mist

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ಟಾಕ್ಸಿಕ್‍’ನಲ್ಲಿ ಅನಿಲ್‍ ಕಪೂರ್‍; 43 ವರ್ಷಗಳ ನಂತರ ಕನ್ನಡ ಚಿತ್ರದಲ್ಲಿ ನಟನೆ?

ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದೆ. ಚಿತ್ರದಲ್ಲಿ ಯಶ್‍, ಕಿಯಾರಾ ಅಡ್ವಾಣಿ, ನಯನತಾರಾ, ಹ್ಯೂಮಾ ಖುರೇಷಿ, ತಾರಾ ಸುತಾರಿಯಾ, ಶ್ರುತಿ ಹಾಸನ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈಗ ಈ ಚಿತ್ರದಲ್ಲಿ ಅನಿಲ್‍ ಕಪೂರ್‍ ಸಹ ನಟಿಸುತ್ತಿರುವ ಸುದ್ದಿ ಬಂದಿದೆ.

‘ಟಾಕ್ಸಿಕ್‍’ ಚಿತ್ರದ ಚಿತ್ರೀಕರಣ ಇದೀಗ ಮುಂಬೈನಲ್ಲಿ ನಡೆಯುತ್ತಿದ್ದು, ಯಶ್‍ ಕೆಲವು ದಿನಗಳಿಂದ ಪ್ರತಿದಿನ ಚಿತ್ರೀಕರಣಕ್ಕೆ ಜೆಟ್ಟಿ (ದೋಣಿ) ಮೂಲಕ ಹೋಗಿ ಬರುತ್ತಿದ್ದಾರೆ.ಚ ಇತ್ತೀಚೆಗೆ ತ್ರೀಕರಣಕ್ಕೆ ಅನಿಲ್‍ ಕಪೂರ್‍ ಮತ್ತು ಕಿಯಾರಾ ಅಡ್ವಾಣಿ ಜೊತೆಯಾಗಿ ದೋಣಿಯಲ್ಲಿ ಪ್ರಯಾಣ ಬೆಳೆಸಿದ್ದಾರೆ. ಹಾಗಾಗಿ, ಅನಿಲ್‍ ಕಪೂರ್‍ ಈ ಚಿತ್ರದಲ್ಲಿ ನಟಿಸುತ್ತಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ, ಚಿತ್ರದಲ್ಲಿ ಅವರು ನಟಿಸುತ್ತಿರುವ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಘೋಷಣೆ ಬಂದಿಲ್ಲ.

ನಟ ಅನಿಲ್‍ ಕಪೂರ್‍ ಹಿಂದಿಯಲ್ಲಿ ಜನಪ್ರಿಯಯವಾಗುವುದಕ್ಕೂ ಮೊದಲು 1983ರಲ್ಲಿ ಬಿಡುಗಡೆಯಾದ ‘ಪಲ್ಲವಿ ಅನುಪಲ್ಲವಿ’ ಚಿತ್ರದಲ್ಲಿ ನಟಿಸಿದ್ದರು. ಮಣಿರತ್ನಂ ನಿರ್ದೇಶನದ ಈ ಚಿತ್ರದ ನಂತರ, ಅನಿಲ್‍ ಕಪೂರ್‍ ಯಾವೊಂದು ಕನ್ನಡ ಚಿತ್ರದಲ್ಲೂ ನಟಿಸಿರಲಿಲ್ಲ. ಈಗ 41 ವರ್ಷಗಳ ನಂತರ ಅವರು ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ. ಈ ಮಧ್ಯೆ, ಕೆಲವು ನಿರ್ಮಾಪಕರು ಮತ್ತು ನಿರ್ದೇಶಕರು ಅನಿಲ್‍ ಕಪೂರ್‍ ಅವರನ್ನು ಕನ್ನಡ ಚಿತ್ರರಂಗಕ್ಕೆ ಕರೆತರುವ ಪ್ರಯತ್ನ ಮಾಡಿದರಾದರೂ, ಅದು ಸಾಧ್ಯವಾಗಿರಲಿಲ್ಲ. ಇದೀಗ ‘ಟಾಕ್ಸಿಕ್’ ಎಂಬ ಪ್ಯಾನ್ ಇಂಡಿಯಾ ಚಿತ್ರದ ಮೂಲಕ ಅದು ಸಾಧ್ಯವಾಗಿದೆ.

‘ಟಾಕ್ಸಿಕ್‍’ ಚಿತ್ರಕ್ಕೆ ಗೀತೂ ಮೋಹನ್‍ ದಾಸ್‍ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದರೆ, ಕೆ.ವಿ.ಎನ್. ಪ್ರೊಡಕ್ಷನ್ಸ್ ಬ್ಯಾನರ್‍ ಅಡಿ ಕೋನ ವೆಂಕಟ್‍ನಾರಾಯಣ್‍ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರವು 2025ರಲ್ಲಿ ಬಿಡುಗಡೆಯಾಗಲಿದೆ.

 

Tags:
error: Content is protected !!