ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದೆ. ಚಿತ್ರದಲ್ಲಿ ಯಶ್, ಕಿಯಾರಾ ಅಡ್ವಾಣಿ, ನಯನತಾರಾ, ಹ್ಯೂಮಾ ಖುರೇಷಿ, ತಾರಾ ಸುತಾರಿಯಾ, ಶ್ರುತಿ ಹಾಸನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈಗ ಈ ಚಿತ್ರದಲ್ಲಿ ಅನಿಲ್ ಕಪೂರ್ ಸಹ ನಟಿಸುತ್ತಿರುವ ಸುದ್ದಿ ಬಂದಿದೆ.
‘ಟಾಕ್ಸಿಕ್’ ಚಿತ್ರದ ಚಿತ್ರೀಕರಣ ಇದೀಗ ಮುಂಬೈನಲ್ಲಿ ನಡೆಯುತ್ತಿದ್ದು, ಯಶ್ ಕೆಲವು ದಿನಗಳಿಂದ ಪ್ರತಿದಿನ ಚಿತ್ರೀಕರಣಕ್ಕೆ ಜೆಟ್ಟಿ (ದೋಣಿ) ಮೂಲಕ ಹೋಗಿ ಬರುತ್ತಿದ್ದಾರೆ.ಚ ಇತ್ತೀಚೆಗೆ ತ್ರೀಕರಣಕ್ಕೆ ಅನಿಲ್ ಕಪೂರ್ ಮತ್ತು ಕಿಯಾರಾ ಅಡ್ವಾಣಿ ಜೊತೆಯಾಗಿ ದೋಣಿಯಲ್ಲಿ ಪ್ರಯಾಣ ಬೆಳೆಸಿದ್ದಾರೆ. ಹಾಗಾಗಿ, ಅನಿಲ್ ಕಪೂರ್ ಈ ಚಿತ್ರದಲ್ಲಿ ನಟಿಸುತ್ತಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ, ಚಿತ್ರದಲ್ಲಿ ಅವರು ನಟಿಸುತ್ತಿರುವ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಘೋಷಣೆ ಬಂದಿಲ್ಲ.
ನಟ ಅನಿಲ್ ಕಪೂರ್ ಹಿಂದಿಯಲ್ಲಿ ಜನಪ್ರಿಯಯವಾಗುವುದಕ್ಕೂ ಮೊದಲು 1983ರಲ್ಲಿ ಬಿಡುಗಡೆಯಾದ ‘ಪಲ್ಲವಿ ಅನುಪಲ್ಲವಿ’ ಚಿತ್ರದಲ್ಲಿ ನಟಿಸಿದ್ದರು. ಮಣಿರತ್ನಂ ನಿರ್ದೇಶನದ ಈ ಚಿತ್ರದ ನಂತರ, ಅನಿಲ್ ಕಪೂರ್ ಯಾವೊಂದು ಕನ್ನಡ ಚಿತ್ರದಲ್ಲೂ ನಟಿಸಿರಲಿಲ್ಲ. ಈಗ 41 ವರ್ಷಗಳ ನಂತರ ಅವರು ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ. ಈ ಮಧ್ಯೆ, ಕೆಲವು ನಿರ್ಮಾಪಕರು ಮತ್ತು ನಿರ್ದೇಶಕರು ಅನಿಲ್ ಕಪೂರ್ ಅವರನ್ನು ಕನ್ನಡ ಚಿತ್ರರಂಗಕ್ಕೆ ಕರೆತರುವ ಪ್ರಯತ್ನ ಮಾಡಿದರಾದರೂ, ಅದು ಸಾಧ್ಯವಾಗಿರಲಿಲ್ಲ. ಇದೀಗ ‘ಟಾಕ್ಸಿಕ್’ ಎಂಬ ಪ್ಯಾನ್ ಇಂಡಿಯಾ ಚಿತ್ರದ ಮೂಲಕ ಅದು ಸಾಧ್ಯವಾಗಿದೆ.
‘ಟಾಕ್ಸಿಕ್’ ಚಿತ್ರಕ್ಕೆ ಗೀತೂ ಮೋಹನ್ ದಾಸ್ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದರೆ, ಕೆ.ವಿ.ಎನ್. ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಕೋನ ವೆಂಕಟ್‍ನಾರಾಯಣ್ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರವು 2025ರಲ್ಲಿ ಬಿಡುಗಡೆಯಾಗಲಿದೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…