ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಟಾಕ್ಸಿಕ್ ಚಿತ್ರದ ವಿರುದ್ಧ ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ.
ಟಾಕ್ಸಿಕ್ ಚಿತ್ರದ ಟೀಸರ್‌ನಲ್ಲಿ ಅಶ್ಲೀಲ ದೃಶ್ಯಗಳಿದ್ದು, ಇದರಿಂದ ಮಕ್ಕಳ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟಾಗುತ್ತಿದೆ. ಟೀಸರ್ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಮಕ್ಕಳ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ವಕೀಲ ಹನುಮಂತ ಲೋಹಿನಾಪುರ ದೂರು ದಾಖಲಿಸಿದ್ದಾರೆ.
ಈ ಮೂಲಕ ಟಾಕ್ಸಿಕ್ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಇದು ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದು ನೋಡಬೇಕಿದೆ.




