ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ ಚಿತ್ರದ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಆರೋಪ ಕೇಳಿಬಂದಿದೆ.
ಚಿತ್ರದ ಕೆಲವು ದೃಶ್ಯಗಳು ಕ್ರೈಸ್ತ ಧರ್ಮಕ್ಕೆ ಮತ್ತು ದೇವದೂತರಿಗೆ ಅಪಮಾನ ಮಾಡುವಂತಿದೆ ಎಂದು ಆರೋಪಿಸಿ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ಈಗ ಕಾನೂನು ಹೋರಾಟಕ್ಕೆ ಇಳಿದಿದೆ.
ಒಕ್ಕೂಟದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಅವರು ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಗೃಹ ಸಚಿವರು, ಸೆನ್ಸಾರ್ ಬೋರ್ಡ್ ಮತ್ತು ಫಿಲ್ಮ್ ಚೇಂಬರ್ ಸೇರಿದಂತೆ ವಿವಿಧ ಇಲಾಖೆಗಳಿಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದಾರೆ.
ಚಿತ್ರದ ದೃಶ್ಯಗಳಲ್ಲಿ ಕ್ರೈಸ್ತ ಧರ್ಮದ ಪವಿತ್ರ ದೇವದೂತ ಸಂತ ಮಿಕಯೇಲ್ ಅವರಿಗೆ ಅಪಮಾನ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೇವದೂತರ ಪ್ರತಿಮೆ ಅಥವಾ ಚಿತ್ರಗಳ ಮುಂದೆ ಅಶ್ಲೀಲವಾಗಿ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ಇದು ಕ್ರೈಸ್ತ ಸಮುದಾಯಕ್ಕೆ ತೀವ್ರ ಮುಜುಗರ ಉಂಟುಮಾಡಿದೆ ಎಂದು ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…