Mysore
26
haze

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಿಂದ ಬಂತು ಇನ್ನೊಂದು ಹಾಡು; ಈ ಬಾರಿ ಆನೆಯಿಂದ ಬಿಡುಗಡೆ

ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ‘ನಮ್ ಪೈಕಿ ಒಬ್ಬ ಹೋಗ್ಬುಟ …’ ಎಂಬ ಹಾಡನ್ನು ಬೆಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಬಿಡುಗಡೆ ಮಾಡಲಾಗಿತ್ತು. ಈ ಹಾಡನ್ನು ಯೋಗರಾಜ್‍ ಭಟ್‍ ಬರೆದಿದ್ದರು. ಈಗ ಇದೇ ಚಿತ್ರದ ಇನ್ನೊಂದು ಹಾಡನ್ನು ಬಿಡುಗಡೆ ಮಾಡಲಾಗಿದ್ದು, ಈ ಹಾಡನ್ನೂ ಯೋಗರಾಜ್‍ ಭಟ್‍ ಬರೆದಿದ್ದಾರೆ.

ಇದೊಂದು ಯುಗಳ ಗೀತೆಯಾಗಿದ್ದು, ‘ಮನಸ್ಸು ಹಾಡ್ತಿದೆ ವಯಸ್ಸು ಕಾಡ್ತದೆ …’ ಎಂದು ಸಾಗುತ್ತದೆ. ಈ ಹಾಡನ್ನು ಸೋನು ನಿಗಂ ಹಾಗೂ ಇಂದು ನಾಗರಾಜ್ ಹಾಡಿದ್ದಾರೆ. ಮನೋಮೂರ್ತಿ ಸಂಗೀತ ಸಂಯೋಜಿಸಿದ್ದಾರೆ. ಮನೋಮೂರ್ತಿ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಬಿಡುಗಡೆಯಾಗಿದೆ.

ಯೋಗರಾಜ್ ಸಿನಿಮಾಸ್ ಅರ್ಪಿಸುತ್ತಿರುವ ಈ ಚಿತ್ರವನ್ನು ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಹಾಗೂ ವಿದ್ಯಾ ದಂಪತಿ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರವನ್ನು ಗೀತ ರಚನೆಕಾರ ರಾಮ್‍ನಾರಾಯಣ್‍ ನಿರ್ದೇಶನ ಮಾಡಿದ್ದಾರೆ.

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಲ್ಲಿ ಮಡೆನೂರು ಮನು, ಮೌನ ಗುಡ್ಡೆಮನೆ, ಶರತ್ ಲೋಹಿತಾಶ್ವ, ತಬಲ ನಾಣಿ, ಸೋನಾಲ್ ಮೊಂತೆರೊ, ಕರಿಸುಬ್ಬು, ಡ್ಯಾಗನ್ ಮಂಜು, ಸೀನ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಯೋಗರಾಜ್‍ ಭಟ್‍ ಮತ್ತು ಇಸ್ಲಾಮುದ್ದೀನ್‍ ಕಥೆ ರಚಿಸಿದ್ದಾರೆ.

ಮಡೆನೂರು ಮನು, ಇದಕ್ಕೂ ಮೊದಲು ‘ಕೇದಾರನಾಥ್‍ ಕುರಿ ಫಾರಂ’ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದರು. ಅದಕ್ಕೂ ಮುನ್ನ ‘ಹಳ್ಳಿ ಹೈಕ್ಳು ಪ್ಯಾಟೆ ಲೈಫು’ ಚಿತ್ರದಲ್ಲೂ ನಟಿಸಿದ್ದರು. ಈ ಎರಡೂ ಚಿತ್ರಗಳು ಅಷ್ಟೇನೂ ಸದ್ದು ಮಾಡಲಿಲ್ಲ. ಈಗ ಮನು ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರವಾದರೂ ಅವರಿಗೆ ಗೆಲುವು ತಂದುಕೊಡುತ್ತದಾ ಎಂದು ನೋಡಬೇಕಿದೆ.

Tags:
error: Content is protected !!