ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ‘ನಮ್ ಪೈಕಿ ಒಬ್ಬ ಹೋಗ್ಬುಟ …’ ಎಂಬ ಹಾಡನ್ನು ಬೆಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಬಿಡುಗಡೆ ಮಾಡಲಾಗಿತ್ತು. ಈ ಹಾಡನ್ನು ಯೋಗರಾಜ್ ಭಟ್ ಬರೆದಿದ್ದರು. ಈಗ ಇದೇ ಚಿತ್ರದ ಇನ್ನೊಂದು ಹಾಡನ್ನು ಬಿಡುಗಡೆ ಮಾಡಲಾಗಿದ್ದು, ಈ ಹಾಡನ್ನೂ ಯೋಗರಾಜ್ ಭಟ್ ಬರೆದಿದ್ದಾರೆ.
ಇದೊಂದು ಯುಗಳ ಗೀತೆಯಾಗಿದ್ದು, ‘ಮನಸ್ಸು ಹಾಡ್ತಿದೆ ವಯಸ್ಸು ಕಾಡ್ತದೆ …’ ಎಂದು ಸಾಗುತ್ತದೆ. ಈ ಹಾಡನ್ನು ಸೋನು ನಿಗಂ ಹಾಗೂ ಇಂದು ನಾಗರಾಜ್ ಹಾಡಿದ್ದಾರೆ. ಮನೋಮೂರ್ತಿ ಸಂಗೀತ ಸಂಯೋಜಿಸಿದ್ದಾರೆ. ಮನೋಮೂರ್ತಿ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಬಿಡುಗಡೆಯಾಗಿದೆ.
ಯೋಗರಾಜ್ ಸಿನಿಮಾಸ್ ಅರ್ಪಿಸುತ್ತಿರುವ ಈ ಚಿತ್ರವನ್ನು ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಹಾಗೂ ವಿದ್ಯಾ ದಂಪತಿ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರವನ್ನು ಗೀತ ರಚನೆಕಾರ ರಾಮ್‍ನಾರಾಯಣ್ ನಿರ್ದೇಶನ ಮಾಡಿದ್ದಾರೆ.
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಲ್ಲಿ ಮಡೆನೂರು ಮನು, ಮೌನ ಗುಡ್ಡೆಮನೆ, ಶರತ್ ಲೋಹಿತಾಶ್ವ, ತಬಲ ನಾಣಿ, ಸೋನಾಲ್ ಮೊಂತೆರೊ, ಕರಿಸುಬ್ಬು, ಡ್ಯಾಗನ್ ಮಂಜು, ಸೀನ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಯೋಗರಾಜ್ ಭಟ್ ಮತ್ತು ಇಸ್ಲಾಮುದ್ದೀನ್ ಕಥೆ ರಚಿಸಿದ್ದಾರೆ.
ಮಡೆನೂರು ಮನು, ಇದಕ್ಕೂ ಮೊದಲು ‘ಕೇದಾರನಾಥ್ ಕುರಿ ಫಾರಂ’ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದರು. ಅದಕ್ಕೂ ಮುನ್ನ ‘ಹಳ್ಳಿ ಹೈಕ್ಳು ಪ್ಯಾಟೆ ಲೈಫು’ ಚಿತ್ರದಲ್ಲೂ ನಟಿಸಿದ್ದರು. ಈ ಎರಡೂ ಚಿತ್ರಗಳು ಅಷ್ಟೇನೂ ಸದ್ದು ಮಾಡಲಿಲ್ಲ. ಈಗ ಮನು ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರವಾದರೂ ಅವರಿಗೆ ಗೆಲುವು ತಂದುಕೊಡುತ್ತದಾ ಎಂದು ನೋಡಬೇಕಿದೆ.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…