ಮನರಂಜನೆ

‘ಹಗ್ಗ’ ಹಿಡಿದು ಬಂದ ಅನು ಪ್ರಭಾಕರ್ ; ಆಗಸ್ಟ್‌ ನಲ್ಲಿ ಚಿತ್ರ ತೆರೆಗೆ

ಅನು ಪ್ರಭಾಕರ್‍ ಇತ್ತೀಚೆಗೆ ಚಿತ್ರದಿಂದ ಚಿತ್ರಕ್ಕೆ ವಿಭಿನ್ನ ಪ್ರಯತ್ನ ಮತ್ತು ಹೊಸ ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ‘ಮೆಲೋಡಿ ಡ್ರಾಮಾ’ ಎಂಬ ಚಿತ್ರದಲ್ಲಿ ಅವರು ಮೊದಲ ಬಾರಿಗೆ ವಿಲನ್ ಆಗಿ ಕಾಣಿಸಿಕೊಂಡಿದ್ದರು. ಈಗ ಅವರು ಸದ್ದಿಲ್ಲದೆ ಇನ್ನೊಂದು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.

ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ ‘ಹಗ್ಗ’ ಚಿತ್ರದ ಮೋಷನ್ ಪೋಸ್ಟರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಮೋಷನ್‍ ಪೋಸ್ಟರ್‍ನಲ್ಲಿ ಅನು ಪ್ರಭಾಕರ್‍ ರೌದ್ರಾವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಹಗ್ಗದ ಒಂದು ತುದಿಯನ್ನು ಅವರು ಹಿಡಿದರೆ, ಇನ್ನೊಂದು ತುದಿಯನ್ನು ನಾಯಕ ವೇಣು ಹಿಡಿದಿದ್ದಾರೆ. ಈ ಹಗ್ಗಕ್ಕೂ ಅವರಿಬ್ಬರಿಗೂ ಏನು ಸಂಬಂಧ? ಈ ಹಗ್ಗದಿಂದ ಯಾರ್ಯಾರ ಜೀವನದಲ್ಲಿ ಏನೆಲ್ಲಾ ಆಗುತ್ತದೆ ಎಂಬುದನ್ನು ಚಿತ್ರದಲ್ಲೇ ನೋಡಬೇಕು. ಅಂದಹಾಗೆ, ಚಿತ್ರವು ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾಗಲಿದೆ.

‘ಹಗ್ಗ’ ಚಿತ್ರಕ್ಕೆ ನಿರ್ಮಾಪಕ ರಾಜ್‍ ಭಾರದ್ವಾಜ್‍ ಕಥೆ ಬರೆದಿದ್ದು, ಚಿತ್ರಕಥೆಯನನ್ನು ರಾಜ್ ಭಾರದ್ವಾಜ್, ಅವಿನಾಶ್ ಹಾಗೂ ಮನೋಹರ್ ಜೊತೆಯಾಗಿ ಬರೆದಿದ್ದಾರೆ.

ಚಿತ್ರದಲ್ಲಿ ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ, ತಬಲನಾಣಿ, ಅವಿನಾಶ್, ಭವಾನಿ ಪ್ರಕಾಶ್, ಸುಧಾ ಬೆಳವಾಡಿ, ಪ್ರಿಯ ಹೆಗ್ಡೆ, ಮೈಕೋ ಮಂಜು, ಸಂಜು ಬಸಯ್ಯ, ಸದಾನಂದ ಕಾಳಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಈ ಚಿತ್ರಕ್ಕೆ ಮ್ಯಾಥ್ಯೂಸ್ ಮನು ಸಂಗೀತ ಮತ್ತು ಸಿನಿಟೆಕ್ ಸೂರಿ ಅವರ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

7 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

8 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

8 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

8 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

8 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

8 hours ago