ಮನರಂಜನೆ

ʼನೆಕ್ಸ್ಟ್‌ ಲೆವೆಲ್‌ʼಗೆ ಆರಾಧನಾ ರಾಮ್‍; ಉಪೇಂದ್ರ ಹೊಸ ಚಿತ್ರಕ್ಕೆ ನಾಯಕಿ

ಅರವಿಂದ್‍ ಕೌಶಿಕ್‍ ನಿರ್ದೇಶನದ ಹೊಸ ಚಿತ್ರದಲ್ಲಿ ಉಪೇಂದ್ರ ನಾಯಕನಾಗಿ ನಟಿಸಲಿದ್ದಾರೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದೆ ಬಂದಿತ್ತು. ‘ನೆಕ್ಸ್ಟ್ ಲೆವೆಲ್‍’ ಹೆಸರಿನ ಈ ಚಿತ್ರಕ್ಕೆ ಇದೀಗ ಮಾಲಾಶ್ರೀ ಅವರ ಮಗಳು ಆರಾಧನಾ ರಾಮ್‍ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

‘ಕಾಟೇರ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಹೆಜ್ಜೆ ಇಟ್ಟಿದ್ದ ಆರಾಧನಾ, ಈ ಒಂದೂವರೆ ವರ್ಷಗಳಲ್ಲಿ ಯಾವ ಚಿತ್ರವನ್ನೂ ಒಪ್ಪಿಕೊಮಡಿರಲಿಲ್ಲ. ಮೊದಲ ಸಿನಿಮಾದಲ್ಲಿಯೇ ದರ್ಶನ್ ಅವರಂತಹ ಸ್ಟಾರ್ ಹೀರೋಗೆ ಜೋಡಿಯಾಗಿ ಅಭಿನಯಿಸಿದ್ದ ಆರಾಧನಾ, ಈಗ ಕನ್ನಡ ಚಿತ್ರರಂಗದ ಮತ್ತೊಬ್ಬ ಜನಪ್ರಿಯ ನಟರೊಂದಿಗೆ ತೆರೆ ಹಂಚಿಕೊಳ್ಳುವ ಮೂಲಕ ವಾಪಸ್ಸಾಗಿದ್ದಾರೆ.

ತರುಣ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ತರುಣ್ ಶಿವಪ್ಪ ‘ನೆಕ್ಸ್ಟ್ ಲೆವೆಲ್’ ಚಿತ್ರ ನಿರ್ಮಿಸುವುದಕ್ಕೆ ಮುಂದಾಗಿದ್ದು, ಇದೊಂದು ಪ್ಯಾನ್‍ ಇಂಡಿಯಾ ಚಿತ್ರವಾಗಿರಲಿದೆಯಂತೆ. ಬೆಂಗಳೂರಿನಲ್ಲಿ ಸದ್ಯದಲ್ಲೇ ‘ನೆಕ್ಸ್ಟ್‌ ಲೆವೆಲ್’ ಸಿನಿಮಾದ ಅದ್ಧೂರಿ ಮುಹೂರ್ತ ನಡೆಯಲಿದ್ದು, ಬೆಂಗಳೂರು, ಮುಂಬೈ, ಹೈದರಾಬಾದ್‌ ಸೇರಿದಂತೆ ಭಾರತದ ಹಲವು ಕಡೆ ಚಿತ್ರದ ಚಿತ್ರೀಕರಣ ನಡೆಯಲಿದೆ.

ಸಿನಿಮಾದ ಹೆಚ್ಚಿನ ಭಾಗ ವಿಎಫ್‌ಎಕ್ಸ್‌ನಿಂದ ಕೂಡಿರಲಿದ್ದು, ಇದಕ್ಕಾಗಿ ಚಿತ್ರತಂಡವು ಕೆನಡಾ ಸೇರಿದಂತೆ ಅನೇಕ ವಿದೇಶಿ ಗ್ರಾಫಿಕ್ಸ್‌ ಸ್ಟುಡಿಯೋಗಳು ಹಾಗೂ ಭಾರತದ ಪ್ರತಿಷ್ಠಿತ ಗ್ರಾಫಿಕ್ಸ್‌ ನಿರ್ಮಾಣ ಸಂಸ್ಥೆಗಳ ಸಹಯೋಗದೊಂದಿಗೆ ಪ್ಯಾನ್‌ ಇಂಡಿಯಾ ಮಟ್ಟದ ಈ ದೊಡ್ಡ ಸಿನಿಮಾವನ್ನು ಕಡಿಮೆ ಅವಧಿಯಲ್ಲಿ ನಿರ್ಮಿಸುವ ಗುರಿ ಹೊಂದಿದೆ.

ಉಪೇಂದ್ರ ಮತ್ತು ಆರಾಧನಾ ರಾಮ್‍ ಹೊರತುಪಡಿಸಿದರೆ, ಮಿಕ್ಕಂತೆ ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಾರೆ ಎಂಬ ವಿಷಯವನ್ನು ಚಿತ್ರತಂಡ ಬಹಿರಂಗಗೊಳಿಸಿಲ್ಲ. ಈ ಹಿಂದೆ, ತರುಣ್‍್ ಶಿವಪ್ಪ ‘ಛೂ ಮಂತರ್’ ಚಿತ್ರದ ಛಾಯಾಗ್ರಾಹಕ ಅನೂಪ್ ಕಟ್ಟುಕರನ್ ಈ ಚಿತ್ರಕ್ಕೂ ಕೆಲಸ ಮಾಡುತ್ತಿದ್ದಾರೆ. ಸಂಗೀತ ನಿರ್ದೇಶಕ ಮತ್ತು ಉಳಿದ ತಂತ್ರಜ್ಞರ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

5 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

6 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

7 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

7 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

7 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

8 hours ago